July 1, 2025
Screenshot 2024-06-17 125209

ಬೆಂಗಳೂರು: ರಾಜ್‌ ಕುಮಾರ್‌ ಕುಟುಂಬದ ಕುಡಿ ಯುವರಾಜ್ ಕುಮಾರ್ ವಿಚ್ಚೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ನಟ ಯುವರಾಜ್ ಕುಮಾರ್ ಪತ್ನಿ ಶ್ರೀದೇವಿ ಮೇಲೆ ಅಗೌರವ, ಮಾನಸಿಕ ಕ್ರೌರ್ಯದ ಆರೋಪ ಹೊರಿಸಿ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಇದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಯುವರಾಜ್ ಕುಮಾರ್ ಹಾಗೂ ಸಪ್ತಮಿ ಗೌಡ ನಡುವಿನ ಸಂಬಂಧದಿಂದ ಪತಿ ತನಗೆ ವಿಚ್ಚೇದನ ನೀಡಲು ಮುಂದಾಗಿದ್ದಾರೆ ಎಂದು ಯುವ ಪತ್ನಿ ಆರೋಪಿಸಿದ್ದರು. ಇದೀಗ ಸಪ್ತಮಿ ಗೌಡ ಕೋರ್ಟ್ ಮೆಟ್ಟಿಲೇರಿದ್ದಾರೆ.

ಹೌದು ಶ್ರೀದೇವಿ ಪತಿ ಯುವ ವಿರುದ್ಧ ಅಕ್ರಮ ಸಂಬಂಧದ ಆರೋಪ ಮಾಡಿದ್ದರು. ಅಲ್ಲದೆ, ಸಪ್ತಮಿ ಗೌಡ ಹೆಸರನ್ನು ಸಹ ಪ್ರಕರಣದಲ್ಲಿ ಎಳೆದು ತಂದಿದ್ದರು. ಸಪ್ತಮಿ ಗೌಡ ಹಾಗೂ ಯುವರಾಜ್ ಪರಸ್ಪರ ಸಂಬಂಧದಲ್ಲಿದ್ದಾರೆ. ತಾವು ಅಮೆರಿಕಕ್ಕೆ ತೆರಳಿದಾಗ ಯುವ ಹಾಗೂ ಸಪ್ತಮಿ ಸಹಜೀವನ ನಡೆಸಿದ್ದಾರೆ ಎಂದು ಶ್ರೀದೇವಿ ಭೈರಪ್ಪ ಆರೋಪ ಮಾಡಿದ್ದರು. ಸಪ್ತಮಿ ಗೌಡ ಅವರಿಗಾಗಿ ನನ್ನನ್ನು ಮನೆಯಿಂದ ಹೊರಗೆ ಹಾಕುವ ಪ್ರಯತ್ನವೂ ನಡೆದಿತ್ತು ಎಂದು ಸಹ ಶ್ರೀದೇವಿ ತಮ್ಮ ವಕೀಲರ ಮೂಲಕ ಆರೋಪ ಮಾಡಿದ್ದರು.

ಇದೀಗ ನಟಿ ಸಪ್ತಮಿ ಗೌಡ, ಶ್ರೀದೇವಿ ಭೈರಪ್ಪ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದು ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಶ್ರೀದೇವಿ ಭೈರಪ್ಪ ವಿರುದ್ಧ ಕೋರ್ಟ್ ಮೆಟ್ಟಿಲೇರಿರುವ ಸಪ್ತಮಿ ಗೌಡ ನಿರ್ಬಂಧಕಾಜ್ಞೆ ನೀಡುವಂತೆ ಮನವಿ ಮಾಡಿದ್ದಾರೆ. ತಮ್ಮ ವಿರುದ್ಧ ಶ್ರೀದೇವಿ, ಇಲ್ಲ ಸಲ್ಲದ ಹೇಳಿಕೆ ನೀಡಿದ್ದಾರೆ. ಸುಳ್ಳು ಆರೋಪ ಹೊರಿಸಿದ್ದಾರೆ ಎಂದು ಸಪ್ತಮಿ ಆರೋಪ ಮಾಡಿದ್ದು, ಶ್ರೀದೇವಿ ಭೈರಪ್ಪ ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆ ನೀಡುವಂತೆ ನಿರ್ಬಂಧಕಾಜ್ಞೆ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

 

Leave a Reply

Your email address will not be published. Required fields are marked *