November 22, 2024

ಬೆಂಗಳೂರು: ನಟ ದರ್ಶನ್ ಗ್ಯಾಂಗ್ ಕ್ರೌರ್ಯ ದಿನೇದಿನೇ ಬಗೆದಷ್ಟು ಬೆಳಕಿಗೆ ಬರುತ್ತಿದ್ದು, ಇದೀಗ ಗರಡಿ ಚಿತ್ರದ ಹಿರೋ ಯಶಸ್‌ ಸೂರ್ಯ ನಿಗೆ ಹರಡಿಕೊಂಡಿದೆ. ರೇಣುಕಾ ಸ್ವಾಮಿ ಹತ್ಯೆಗೂ ಮುನ್ನ ದರ್ಶನ್ ಮತ್ತು ಗ್ಯಾಂಗ್ ರಾಜರಾಜೇಶ್ವರಿ ನಗರದ ಸ್ಟೋನಿ ಬ್ಲ್ಯೂಕ್ ರೆಸ್ಟೋರೆಂಟ್ ನಲ್ಲಿ ಪಾರ್ಟಿ ಮಾಡಿದ್ದರು. ಪಾರ್ಟಿಯಲ್ಲಿ ನಟ ಚಿಕ್ಕಣ್ಣ ಮತ್ತು ಗರಡಿ ಚಿತ್ರದ ನಾಯಕ ನಟ ಯಶಸ್ ಸೂರ್ಯ, ಭಾಗವಹಿಸಿದ್ದರು ಎನ್ನಲಾಗಿದೆ.

ಹಿನ್ನೆಲೆಯಲ್ಲಿ ಈಗಾಗಲೇ ಚಿಕ್ಕಣ್ಣನನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಗರಡಿ ಚಿತ್ರದ ನಾಯಕ ನಟ ಯಶಸ್ ಸೂರ್ಯನಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ. ಪ್ರಕರಣ ಸಂಬಂಧ ನಟ ಯಶಸ್ ಸೂರ್ಯಗೆ ನೋಟಿಸ್ ನೀಡಲು ಪೊಲೀಸರು ತಯಾರಿ ಮಾಡಿಕೊಂಡಿದ್ದಾರೆ..

ನಟ ಯಶಸ್ ಸೂರ್ಯ ಕೂಡ ದರ್ಶನ್ ಜೊತೆ ಪಾರ್ಟಿಯಲ್ಲಿ ಭಾಗಿಯಾಗಿದ್ರಿಂದ ಸಾಕ್ಷಿಯನ್ನಾಗಿ ಪರಿಗಣಿಸುವ ಸಾಧ್ಯತೆ ಇದೆ.. ಸಂಬಂಧ ಇವತ್ತು ವಿಚಾರಣೆಗೆ ಹಾಜರಾಗಲು ಪೊಲೀಸರು ನೋಟಿಸ್ ನೀಡಲಿದ್ದಾರೆ ಎನ್ನಲಾಗಿದೆ. ಒಂದು ವೇಳೆ ನಟ ದರ್ಶನ್ ಕೆಲಸದ ಬಗ್ಗೆ ಚರ್ಚೆ ಮಾಡಿದ್ದರೆ ಸಂಕಷ್ಟ ಎದುರಾಗುವ ಸಾಧ್ಯತೆಯೂ ಇದೆ.

 

Leave a Reply

Your email address will not be published. Required fields are marked *