
ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ಜೈಲು ಪಾಲಾಗಿರುವ ಆರೋಪಿಗೆ ಸಂತ್ರಸ್ತೆಯನ್ನೇ ಮದುವೆಯಾಗಲು ಮಧ್ಯಂತರ ಜಾಮೀನು ಮಂಜೂರು ಮಾಡುವ ಮೂಲಕ ಹೈಕೋರ್ಟ್ ಅಪರೂಪದ ಆದೇಶ ನೀಡಿದೆ. ಆರೋಪಿ ಲೈಂಗಿಕ ಸಂಪರ್ಕ ಬೆಳಸಿದ ಪರಿಣಾಮ ಸಂತ್ರಸ್ತೆಗೆ ಮಗು ಜನಿಸಿದೆ. ಸಂತ್ರಸ್ತೆಗೆ ಈಗ 18 ವರ್ಷ ವಯಸ್ಸು. ಆರೋಪಿ ಮತ್ತು ಸಂತ್ರಸ್ತೆಯೇ ಮಗುವಿಗೆ ತಂದೆ-ತಾಯಿ ಎಂಬುದು ಮಗುವಿನ ಡಿಎನ್‌ಎ ವರದಿ ಸ್ಪಷ್ಟಪಡಿಸುತ್ತದೆ. ಮಗುವನ್ನು ಸಂತ್ರಸ್ತೆ ತಾಯಿ ಪೋಷಣೆ ಮಾಡಬೇಕಿದೆ.
ಸಣ್ಣ ಮಗುವಿಗೆ ಈ ಹಿಂದೆ ಏನೆಲ್ಲಾ ಘಟನೆ ನಡೆದಿದೆ ಎಂಬುದು ಗೊತ್ತಿಲ್ಲ, ಮಗು ಭವಿಷ್ಯದಲ್ಲಿ ಯಾವುದೇ ರೀತಿಯ ಅವಮಾನ ಅನುಭವಿಸಬಾರದು. ತಾಯಿ, ಮಗುವಿನ ಹಿತಾಸಕ್ತಿಯನ್ನು ರಕ್ಷಣೆ ಮಾಡಬೇಕಿದೆ.ಹಾಗಾಗಿ ಸಂತ್ರಸ್ತೆಯನ್ನು ಮದುವೆಯಾಗಲು ಆರೋಪಿಗೆ ಅನುಮತಿ ನೀಡುವುದು ಸೂಕ್ತವಾಗಿದೆ ಎಂದು ಹೈಕೋರ್ಟ್ ಆದೇಶಿಸಿದೆ.
ಪೋಕೋ ಕಾಯ್ದೆಯಡಿ ತನ್ನ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ಕೋರಿ ಆರೋಪಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಸಂತ್ರಸ್ತೆಯನ್ನು ಮದುವೆಯಾಗಲು ಜೂ.17ರಿಂದ ಅನ್ವಯವಾಗುವಂತೆ ಜು.3ರವರೆಗೆ ರವಿಗೆ ಮಧ್ಯಂತರ ಜಾಮೀನು ಮೇಲೆ ಬಿಡುಗಡೆ ಮಾಡಬೇಕು ಎಂದು ಆದೇಶಿಸಿದೆ.
ಸಂತ್ರಸ್ತೆಯನ್ನು ಮದುವೆಯಾಗಿ ಜು.3ರ
ಸಾಯಂಕಾಲ ಆರೋಪಿ ಜೈಲಿಗೆ
ವಾಪಸಾಗಬೇಕು.. ಜು.4ರಂದು ವಿವಾಹ
ನೋಂದಣಿ ಪತ್ರವನ್ನು ಕೋರ್ಟ್‌ಗೆ
ಸಲ್ಲಿಸಬೇಕು. ಜಾಮೀನು ಮೇಲೆ ಹೊರಗಿರುವ
ಸಮಯದಲ್ಲಿ ಆರೋಪಿ
ವಾರಕ್ಕೊಮ್ಮೆಸಂಬಂಧಪಟ್ಟ ಪೊಲೀಸ್
ಠಾಣೆಗೆ ಹಾಜರಾಗಿ ಸಹಿ ಮಾಡಬೇಕು. ಒಂದು
ವೇಳೆ ಮಧ್ಯಂತರ ಜಾಮೀನು
ಮಂಜೂರಾತಿಯ ಉದ್ದೇಶ ಉಲ್ಲಂಘಿಸಿದರೆ,
ಗಂಭೀರವಾಗಿ ತೆಗೆದುಕೊಳ್ಳಲಾಗುವುದು
ಎಂದು ಸೂಚಿಸಿರುವ ನ್ಯಾಯ ಪೀಠ, ವಿಚಾರಣೆಯನ್ನು ಜು.4ಕ್ಕೆ ಮುಂದೂಡಿದೆ.