August 19, 2025
1271798-screenshot-2024-06-13-195745

ತನ್ನ ಹೆಸರು, ವಿಳಾಸ, ಕೆಲಸ ಮಾಡುವ ಜಾಗ, ಮೊಬೈಲ್ ಸಂಖ್ಯೆ ಹೀಗೆ ಪೋಟೋ ಸಹಿತ ರೇಣುಕಾಸ್ವಾಮಿ ತನ್ನ ವೈಯಕ್ತಿಕ ವಿವರ ಕಳುಹಿಸುವ ಮೂಲಕ ನಟ ದರ್ಶನ್‌ ಗ್ಯಾಂಗ್ ಬಲೆಗೆ ತಾನಾಗಿಯೇ ಬಿದ್ದು ಪ್ರಾಣಕ್ಕೆ ಎರವು ಮಾಡಿಕೊಂಡ ಕುತೂಹಲಕಾರಿ ವಿಷಯ ಬಯಲಾಗಿದೆ. ಅಶ್ಲೀಲ ಸಂದೇಶ ಕಳುಹಿಸಿದ್ದ ರೇಣುಕಾಸ್ವಾಮಿಯನ್ನು ಇನ್‌ಸ್ಟಾಗ್ರಾಂನಲ್ಲಿ ‘ಸಲುಗೆಯ’ ಚಾಟಿಂಗ್ ಮೂಲಕ ತನ್ನ ಗಾಳಕ್ಕೆ ಸೆಳೆದ ಪವಿತ್ರಾಗೌಡ, ಆತನಿಂದಲೇ ಸ್ವವಿವರ ಸಂಗ್ರಹಿಸಿ ದರ್ಶನ್‌ಗೆ ತಿಳಿಸಿದ್ದಳು.

ಈ ವಿವರವನ್ನು ದರ್ಶನ್‌, ಚಿತ್ರದುರ್ಗ ಜಿಲ್ಲೆಯ ತಮ್ಮ ಅಭಿಮಾನಿಗಳ ಸಂಘದ ಅಧ್ಯಕ್ಷ ರಾಘವೇಂದ್ರನಿಗೆ ಕಳುಹಿಸಿ ರೇಣುಕಾಸ್ವಾಮಿಯನ್ನು ಕೂಡಲೇ ಬೆಂಗಳೂರಿಗೆ ಕರೆತರುವಂತೆ ಹುಕುಂ ನೀಡಿದ್ದರು. ಅಂತೆಯೇ ರೇಣುಕಾಸ್ವಾಮಿಯನ್ನು ಜೂ.8ರಂದು ಚಿತ್ರದುರ್ಗದಲ್ಲಿ ಅಪಹರಿಸಿ ಕರೆತಂದು ದರ್ಶನ್‌ಗೆ ರಾಘವೇಂದ್ರ ತಂಡ ಒಪ್ಪಿಸಿತ್ತು ಎಂದು ಉನ್ನತ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *