
ತೆಲಂಗಾಣದಲ್ಲಿ ಸಾರ್ವಜನಿಕರನ್ನು ರಕ್ಷಣೆ ಮಾಡುವ ಪೊಲೀಸರ ಮೇಲೆಯೇ ಅತ್ಯಾಚಾರ ಮಾಡಿರುವ ಅವಮಾನೀಯ ಘಟನೆಯೊಂದು ನಡೆದಿದೆ. ಜಯಶಂಕರ್ ಭೂಪಾಲಪಲ್ಲಿ ಜಿಲ್ಲೆಯಲ್ಲಿ ಮಹಿಳಾ ಹೆಡ್ ಕಾನ್ಸ್ಟೆಬಲ್ಗೆ ಗನ್ ತೋರಿಸಿ ಅತ್ಯಾಚಾರ ಮಾಡಲಾಗಿದೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಬುಧವಾರ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಬಂಧಿಸಲಾಗಿದೆ.
ಇದರ ಜತೆಗೆ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳಾ ಹೆಡ್ ಕಾನ್‌ಸ್ಟೆಬಲ್ ದೂರ ಆಧಾರ ಮೇಲೆ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮೇಲೆ ಹಿರಿಯ ಅಧಿಕಾರಿಗಳು ನಡೆಸಲಾಗಿದ್ದು, ಮಹಿಳಾ ಹೆಡ್ ಕಾನ್‌ಸ್ಟೆಬಲ್ ಆರೋಪ ದೃಢಪಟ್ಟಿದೆ ಎಂದು ತೆಲಂಗಾಣ ಪೊಲೀಸರು ತಿಳಿಸಿದ್ದಾರೆ.
ಜಿಲ್ಲೆಯ ಕಾಳೇಶ್ವರಂ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭವಾನಿ ಸೇನ್ ಎಂಬು ಸಬ್ ಇನ್ಸ್‌ಪೆಕ್ಟರ್ ಈ ಕೃತ್ಯವನ್ನು ಮಾಡಿದ್ದಾನೆ ಎಂದು ಹೇಳಲಾಗಿದೆ. ಆಕೆ ನೀಡಿದ ದೂರಿನಲ್ಲಿ ಜೂನ್ 16 ರಂದು ನೀರಾವರಿ ಯೋಜನೆಯ ವಸತಿ ಸೌಲಭ್ಯದ ಅತಿಥಿ ಕೊಠಡಿಯಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹೇಳಿದ್ದಾರೆ. ಎಸ್‌ಐ ರಿವಾಲ್ವರ್ ತೋರಿಸಿ ಬೆದರಿಸಿ ಅತ್ಯಾಚಾರವೆಸಗಿದ್ದಾನೆ. ನಂತರ ಈ ವಿಚಾರವನ್ನು ಯಾರಿಗೂ ಹೇಳಬಾರದು ಎಂದು ಬೆದರಿಕೆ ಹಾಕಿದ್ದಾನೆ ಎಂದು ಹೆಡ್ ಕಾನ್‌ಸ್ಟೆಬಲ್ ಆರೋಪಿಸಿದರು.