ನಾಡಿನ ಅಗ್ರಗಣ್ಯ ಮಹಿಳಾ ಸಾಹಿತಿಯಾಗಿದ್ದ ನಾಡೋಜ ಕಮಲ ಹಂಪನಾ (89) ಅವರು ಇಂದು ರಾಜಾಜಿನಗರದ ಮನೆಯಲ್ಲಿ ಮಲಗಿದ್ದ ಜಾಗದಲ್ಲಿಯೇ ಚಿರನಿದ್ರೆಗೆ ಜಾರಿದ್ದಾರೆ. ಪತಿ ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ, ದೂರದರ್ಶನ ನಿರ್ದೇಶಕರಾದ ಎಚ್.ಎನ್.ಆರತಿ ಅವರು ಹಾಗೂ ಬಂದು ಮಿತ್ರರು, ಸೇರಿದಂತೆ ಅಪಾರ ಸಾಹಿತ್ಯಾಭಿಮಾನಿಗಳನ್ನು ಅಗಲಿ ಬಾರದ ಲೋಕ ಸೇರಿದ್ದಾರೆ.
ಸಂಜೆಯ ತನಕ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅವರ ಇಚ್ಛೆಯಂತೆ ರಾಮಯ್ಯ ಮೆಡಿಕಲ್ ಕಾಲೇಜಿಗೆ ದೇಹದಾನ ಮಾಡಲಾಗುವುದು ಎಂದು ಅವರ ಕುಟುಂಬ ತಿಳಿಸಿದೆ