August 19, 2025
surajrevannadp-1719073480

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನ ಪೊಲೀಸರು ಬಂಧಿಸಿದ್ದಾರೆ. ಹಾಸನದ ಸೆನ್ ಪೊಲೀಸ್ ಠಾಣೆಯಲ್ಲಿಯೇ ಪೊಲೀಸರು ಬಂಧಿಸಿದ್ದಾರೆ.  ಶನಿವಾರ ಸಂತ್ರಸ್ತ ನೀಡಿದ್ದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ),

342 (ತಪ್ಪಾದ ಬಂಧನಕ್ಕೆ ಶಿಕ್ಷೆ ) ಹಾಗೂ 506 (ಬೆದರಿಕೆ) ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಡಿಜಿಪಿ ಕಚೇರಿಯಲ್ಲಿ ದೂರು ನೀಡಿದ್ದ ಸಂತ್ರಸ್ತ ಹಾಸನ ಎಸ್ಪಿಗೂ ದೂರಿನ ಪ್ರತಿಯನ್ನು ಇ-ಮೇಲ್ ಮಾಡಿದ್ದ. ಮೇಲ್ ಆಧರಿಸಿ ಸಂತ್ರಸ್ತನನ್ನ ಕರೆಸಿ ಮಾಹಿತಿ ಪಡೆದ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದರು.

Leave a Reply

Your email address will not be published. Required fields are marked *