July 1, 2025
saptamigowdadp-1718935418

ನಟ ಯುವರಾಜ್ ಕುಮಾರ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಯುವ ರಾಜ್​ಕುಮಾರ್ ತಮ್ಮ ಪತ್ನಿ ಶ್ರೀದೇವಿಯಿಂದ ವಿಚ್ಛೇದನ ಬಯಸಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದಾರೆ. ಮಾಧ್ಯಮಗಳ ಮುಂದೆ ಯುವ ಪರ ವಕೀಲರು, ಶ್ರೀದೇವಿ ವಿರುದ್ಧ ಹಲವು ಆರೋಪಗಳನ್ನು ಸಹ ಮಾಡಿದ್ದರು.

ವಿಚ್ಛೇದನ ಅರ್ಜಿಯಲ್ಲಿ ಸಹ ಅನೈತಿಕ ಸಂಬಂಧದ ಆರೋಪ ಮಾಡಲಾಗಿತ್ತು. ಅದಕ್ಕೆ ಪ್ರತಿಯಾಗಿ ಶ್ರೀದೇವಿ ಸಹ ಯುವ ವಿರುದ್ಧ ಅನೈತಿಕ ಸಂಬಂಧದ ಆರೋಪ ಮಾಡಿದ್ದರು. ನಟಿ ಸಪ್ತಮಿ ಗೌಡ ಹೆಸರು ಈ ಪ್ರಕರಣದಲ್ಲಿ ಪ್ರಮುಖವಾಗಿ ಕೇಳಿ ಬಂದಿತ್ತು. ಇದೀಗ ಸಪ್ತಮಿ ಗೌಡ ಅವರದ್ದು ಎನ್ನಲಾದ ಆಡಿಯೋ ಇದೀಗ ವೈರಲ್ ಆಗಿದೆ.

ವೈರಲ್ ಆಗಿರುವ ಆಡಿಯೋ ಮಹಿಳೆಯೊಬ್ಬರು ಅಳುತ್ತಾ ರೆಕಾರ್ಡ್ ಮಾಡಿದ ಆಡಿಯೋ ಆಗಿದೆ. ಧ್ವನಿ ಸಪ್ತಮಿ ಗೌಡ ಅವರ ಧ್ವನಿಯನ್ನು ಹೋಲುತ್ತಿದೆ. ‘ಹೌದು ನನ್ನಿಂದ ಹಲವರಿಗೆ ನೋವಾಗಿದೆ. ನನ್ನದು ತಪ್ಪಿಲ್ಲ ಎಂದು ನಾನು ಹೇಳುವುದಿಲ್ಲ. ಆದರೆ ನಾನು ಗುರು (ಯುವ ಮೂಲ ಹೆಸರು) ನಂಬಿ ಮಾಡಿದೆ. ನಿಮ್ಮ ಸೆಟ್ ಅಲ್ಲಿ ಆಗಿದೆ, ಸಾರಿ ಸರ್’ ಎಂಬ ಮಾತುಗಳು ಆಡಿಯೋನಲ್ಲಿವೆ. ಈ ಆಡಿಯೋವನ್ನು ಸಪ್ತಮಿ, ವಿಜಯ್ ಕಿರಗಂದೂರು ಅವರಿಗೆ ಕಳಿಸಿದ್ದಾರೆ ಎನ್ನಲಾಗುತ್ತಿದೆ.

Leave a Reply

Your email address will not be published. Required fields are marked *