August 19, 2025
surajrevanna-2-1718980623

ಬೆಂಗಳೂರು: ಸೂರಜ್ ರೇವಣ್ಣ ಸಲಿಂಗ  ಲೈಂಗಿಕ ಕ್ರಿಯೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಸಂಬಂಧ ಹಾಸನದ ಸೆನ್‌ ಠಾಣೆಯ ಪೊಲೀಸರು ಎಂಎಲ್‌ ಸಿ ಸೂರಜ್‌ ರೇವಣ್ಣ ಅವರನ್ನು ಬಂಧಿಸಲಾಗಿದ್ದು, ಐಪಿಸಿ ಸೆಕ್ಷನ್‌ 377, 342, 506, 34 ರ ಅಡಿ ಸೂರಜ್‌ ವಿರುದ್ಧ ಪ್ರಕರಣ ದಾಖಲಾಗಿದೆ.

ಯುವಕನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸೂರಜ್‌ ರೇವಣ್ಣ ಅವರು ಚನ್ನರಾಯಪಟ್ಟಣ ತಾಲೂಕು ಗನ್ನಿಕಡ ಬಳಿ ಇರುವ ತೋಟದ ಮನೆಗೆ ಜೂ. 16ರಂದು ನನ್ನನ್ನು ಕರೆಸಿಕೊಂಡು ನನ್ನ ಮೇಲೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ದೌರ್ಜನ್ಯ ಎಸಗಿದ್ದಾರೆ ಎಂದು ಅರಕಲಗೂಡು ತಾಲೂಕಿನ ಜೆಡಿಎಸ್‌ ಕಾರ್ಯಕರ್ತನೊಬ್ಬ ಹೊಳೆನರಸೀಪುರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾನೆ.

Leave a Reply

Your email address will not be published. Required fields are marked *