November 19, 2024

ಶಿವಮೊಗ್ಗ :ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ 4 ವರ್ಷಗಳಿಂದ‌ ಲೈಂಗಿಕ ದೌರ್ಜನ್ಯ ನಡೆಸಿದ್ದಲ್ಲದೆ, ಆಕೆಯ ಕುಟುಂಬಕ್ಕೆ ಜೀವ‌ ಬೆದರಿಕೆ ಒಡ್ಡಿರುವ ಆರೋಪದ ಮೇಲೆ    ಬಿಜೆಪಿ ಮುಖಂಡ ಹರತಾಳು ಹಾಲಪ್ಪ ಅವರ ಆಪ್ತ ಅರುಣ್ ಕುಗ್ವೆ ಎಂಬಾತನನ್ನು ಶಿವಮೊಗ್ಗ ಪೊಲೀಸರು  ಬಂಧಿಸಿದ್ದಾರೆ.

ಯುವತಿ ಶಿವಮೊಗ್ಗ ನಗರದ ಮಹಿಳಾ ಠಾಣೆಯಲ್ಲಿ ದಾಖಲಿಸಿರುವ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದು, ಅರುಣ್ ಕುಗ್ವೆಯನ್ನು ಆತನ ಮನೆಯಿಂದ ಪೊಲೀಸರು ಬಂಧಿಸಿದ್ದಾರೆ. ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ ಆರೋಪಗಳ ಮೇಲೆ ಅರುಣ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಈ ಹಿನ್ನೆಲೆ ಅರುಣ್ ಕುಗ್ವೆ ಮತ್ತು ಗಣೇಶ್ ಇಬ್ಬರ ಮೇಲೆ ಐಪಿಸಿ ಸೆಕ್ಷನ್ 354, 376 ಹಾಗೂ 506 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *