ನರೇಗಾ ಯೋಜನೆ ಕಾಮಗಾರಿಯ ಕ್ರಿಯಾ ಯೋಜನೆ ಮಾಡಿಕೊಡಲು ₹20 ಸಾವಿರ ಲಂಚ ಪಡೆಯುತ್ತಿದ್ದ ಆರೋಪದಡಿ ಯಡ್ರಾಮಿ ತಾಲ್ಲೂಕು ಪಂಚಾಯಿತಿ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಮತ್ತು ಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಇಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ತಾಲ್ಲೂಕ ಪಂಚಾಯಿತಿ ಪ್ರಬಾರ ಕಾರ್ಯನಿರ್ವಾಹಕ ಅಧಿಕಾರಿ ಮಹಾಂತೇಶ ಪುರಾಣಿಕ ಮತ್ತು ಗ್ರಾ.ಪಂ. ಕಾರ್ಯದರ್ಶಿ ಅರವಿಂದ ಸಾಹು ಕುರಳಗೇರಾ ಲಂಚ ಪಡೆದ ಆರೋಪಿಗಳು ಎಂದು ತಿಳಿದು ಬಂದಿದೆ. ಮಳ್ಳಿ ಗ್ರಾಮದ ನಬಿಲಾಲ್ ಅವರು ನೀಡಿದ ದೂರಿನ ಅನ್ವಯ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.