ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಾಗಿರುವ ಅಮಿತ್ ದಿಗ್ವೇಕರ್ ಸೇರಿದಂತೆ ಇತರರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ಗೌರಿ ಹತ್ಯೆ ಪ್ರಕರಣದ ಐದನೇ ಆರೋಪಿ ಅಮಿತ್ ದಿಗ್ವೇಕರ್ ಅಲಿಯಾಸ್ ಅಮಿತ್ ಅಲಿಯಾಸ್ ಪ್ರದೀಪ್ ಮಹಾಜನ್;
ಏಳನೇ ಆರೋಪಿ ಸುರೇಶ್ ಎಚ್ ಎಲ್ ಅಲಿಯಾಸ್ ಟೀಚರ್ ಮತ್ತು 17ನೇ ಆರೋಪಿ ಕೆ ಟಿ ನವೀನ್ ಕುಮಾರ್ ಅಲಿಯಾಸ್ ನವೀನ್ ಸಲ್ಲಿಸಿದ್ದ ಪ್ರತ್ಯೇಕ ಜಾಮೀನು ಅರ್ಜಿಗಳ ಸುದೀರ್ಘ ವಿಚಾರಣೆ ಆಲಿಸಿದ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠವು ಆದೇಶ ಕಾಯ್ದಿರಿಸಿದೆ.
11ನೇ ಆರೋಪಿ ಮೋಹನ್ ನಾಯಕ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವುದನ್ನು ಪರಿಗಣಿಸಿ ತಮಗೂ ಜಾಮೀನು ಮಂಜೂರು ಮಾಡಬೇಕು ಎಂಬುದು ಎಲ್ಲಾ ಅರ್ಜಿದಾರರ ವಾದವಾಗಿತ್ತು. ಇದಕ್ಕೆ ತೀವ್ರವಾಗಿ ಆಕ್ಷೇಪಿಸಿದ ಪ್ರಾಸಿಕ್ಯೂಷನ್ “ಮೋಹನ್ ನಾಯಕ್ ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ನ ಬೇರೊಂದು ಪೀಠವು ತಿರಸ್ಕರಿಸಿದ್ದು, ಕೊಲೆ, ಪಿತೂರಿಯಂಥ ಗಂಭೀರ ಆರೋಪಗಳಿರುವಾಗ ಜಾಮೀನು ನೀಡಲಾಗದು ಎಂದಿದೆ.