November 22, 2024

ಮಂಗಳೂರು: ಇಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದ್ದು, ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರವಹಿಸಲು ಮಾಹಿತಿ ನೀಡಲಾಗಿದೆ. ಇನ್ನು ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಗೆ ಗುರುವಾರ ರೆಡ್ ಅಲರ್ಟ್ ಘೋಷಿಸಲಾಗಿದೆ.

Leave a Reply

Your email address will not be published. Required fields are marked *