January 13, 2026
WhatsApp Image 2024-06-28 at 7.23.21 AM

ಹಾವೇರಿ: ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 13 ಜನ ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಘಟನೆ ಜರುಗಿದೆ. ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಡಿಕ್ಕಿಯಾಗಿದೆ.

ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪರಶುರಾಮ್‌, ಭಾಗ್ಯ, ನಾಗೇಶ್, ವಿಶಾಲಾಕ್ಷಿ, ಅರ್ಪಿತಾ, ಸುಭದ್ರಾ ಬಾಯಿ, ಪುಣ್ಯ, ಮಂಜುಳಾ ಬಾಯಿ, ಆದರ್ಶ ಮಾನಸ, ರೂಪ, ಮಂಜುಳಾ ಮೃತಪಟ್ಟವರು. ಮೃತರು ಶಿವಮೊಗ್ಗ ಮೂಲದ ನಿವಾಸಿಗಳು ಎನ್ನಲಾಗಿದೆ. ಓರ್ವ ಬಾಲಕಿ ಮತ್ತು ಅಜ್ಜಿಗೆ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ ಎನ್ನಲಾಗಿದೆ.

ಟಿಟಿ ವಾಹನದಲ್ಲಿದ್ದ ಒಟ್ಟು 15 ಜನರೂ ಸವದತ್ತಿ ರೇಣುಕಾ ಯಲ್ಲಮ್ಮ ದರ್ಶನ ಪಡೆದು ಮರಳಿ ಊರಿಗೆ ಹೋಗುತ್ತಿರುವಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿದ್ದಾರೆ. ಬ್ಯಾಡಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Leave a Reply

Your email address will not be published. Required fields are marked *