October 13, 2025
578cab8f688b74cb8e863018d1b5e9e456b74104b668202e78c4d89b2f09ba60

ಗದಗ : ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೋರುವ ಆರೋಪಿಯನ್ನು ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲೀಸರು ಗದಗಿನ ಬೆಟಗೇರಿ ಸಮೀಪ ವಶಕ್ಕೆ ಪಡೆದು ತಮ್ಮ ಖಾಸಗಿ ವಾಹನದಲ್ಲಿ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಸಿನಿಮೀಯ ರೀತಿಯಲ್ಲಿ ಪೊಲೀಸರ ಮೇಲೆ ದಾಳಿ ಮಾಡಿ ಪೊಲೀಸರ ವಶದಲ್ಲಿದ್ದ ವ್ಯಕ್ತಿಯನ್ನು ಕರೆದುಕೊಂಡು ಹೋಗುವಲ್ಲಿ ಆತನ ಸಂಗಡಿಗರು ಯಶಸ್ವಿಯಾಗಿದ್ದಾರೆ.

ಸದ್ಯಕ್ಕಿರುವ ಪ್ರಾಥಮಿಕ ಮಾಹಿತಿಯಂತೆ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಪ್ಪಳ ಜಿಲ್ಲೆಯ ಗಂಗಾವತಿ ಪೋಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದರು. ಗದಗನ ಬೆಟಿಗೇರಿ ಸಮೀಪ ಬರುತ್ತಿದ್ದಂತೆ ನಾಲ್ಕು ಜನ ಪೊಲೀಸರ ಮೇಲೆ ದಾಳಿ ನಡೆಸಲಾಗಿದ್ದು ಸಣ್ಣಪುಟ್ಟ ಹಲ್ಲೇ ನಡೆಸಿ ಪೊಲೀಸರ ವಶದಲ್ಲಿದ್ದ ವ್ಯಕ್ತಿಯನ್ನು ಪಾರು ಮಾಡಿಕೊಂಡು ಕರೆದುಕೊಂಡು ಹೋಗಿದ್ದಾರೆ. ಸದ್ಯ ಪೊಲೀಸರು ಸ್ಥಳೀಯ ಜಿಲ್ಲಾ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆದಿದ್ದು ಆರೋಪಿಗಳ ಪತ್ತೆಗೆ ಸ್ಥಳೀಯ ಗದಗ್ ಪೊಲೀಸರ ನೆರವು ಕೋರಿದ್ದಾರೆ

Leave a Reply

Your email address will not be published. Required fields are marked *