
ಹುಬ್ಬಳ್ಳಿ ಜೂ.29: 2024-25 ನೇ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಪ್ರವರ್ಗ-1, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ವರಮಾನ ರೂ. 1.00 ಲಕ್ಷ ಮತ್ತು ಪ್ರವರ್ಗ-2ಎ, 2ಬಿ, 3ಎ, 3ಬಿ ವರ್ಗಗಳಿಗೆ ಸೇರಿದ ಪೋಷಕರ ವಾರ್ಷಿಕ ವರಮಾನ ರೂ. 44,500/- ಒಳಗೆ ಇರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿಗಳನ್ನು hಣಣಠಿ://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ/ ವೆಬ್‌ಸೈಟ್ ಮೂಲಕ ಆನ್‌ಲೈನ್ ಜುಲೈ 10ರೊಳಗಾಗಿ ಸಲ್ಲಿಸಬೇಕು.
ಹುಬ್ಬಳ್ಳಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಅರಳೀಕಟ್ಟಿ-507, ಬ್ಯಾಹಟ್ಟಿ-508, ಬಸವೇಶ್ವರನಗರ ಹುಬ್ಬಳ್ಳಿ-509, ನೂಲ್ವಿ-510, ರಾಯನಾಳ-511, ವರೂರ-513, ಭೈರಿದೇವರಕೊಪ್ಪ ಹುಬ್ಬಳ್ಳಿ-514, ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ರಾಜನಗರ-515 ಮತ್ತು ತಿರುಮಲಕೊಪ್ಪ ತಾ. ಹುಬ್ಬಳ್ಳಿ-516 ವಸತಿ ನಿಲಯಗಳಿಗೆ ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತಾಂತ್ರಿಕ ತೋದರೆಗಳಾದಲ್ಲಿ bಛಿತಿಜheಟಠಿಟiಟಿe@gmಚಿiಟ.ಛಿom ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ, ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 8050770004, 8050770005 ಮತ್ತು 9449108069 ಸಂಪರ್ಕಿಸುವAತೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.