
ಅಭಿಮಾನಿಗಳ ಗಾಡಿಗಳಲ್ಲಿ ದರ್ಶನ್ ಖೈದಿ ನಂಬರ್ 6106 ಸ್ಟಿಕ್ಕರ್‌ಗಳಿಗೆ ಡಿಮ್ಯಾಂಡ್ ಹೆಚ್ಚಾಗಿದೆ. ಇದರ ಬೆನ್ನಲ್ಲೇ ದರ್ಶನ್ ಫ್ಯಾನ್ಸ್‌ಗೆ ಕಾನೂನು ಕಂಟಕ ಎದುರಾಗಿದ್ದು, ರೂಲ್ಸ್ ಬ್ರೇಕ್ ಮಾಡಿದರೆ ಕೇಸ್ ಬೀಳುತ್ತೆ ಎಂಬ ಎಚ್ಚರಿಕೆಯನ್ನು ಬೆಂಗಳೂರು ಟ್ರಾಫಿಕ್ ಪೊಲೀಸರು ನೀಡಿದ್ದಾರೆ.
ಕೊಲೆ ಕೇಸ್ನಲ್ಲಿ ನಟ ದರ್ಶನ್ ಜೈಲುಪಾಲಾಗಿದ್ದಾರೆ. ದರ್ಶನ್‌ಗೆ ಜೈಲಿನಲ್ಲಿ ಖೈದಿ ನಂಬರ್ 6106 ಅನ್ನು ನೀಡಲಾಗಿದೆ. ಈ ನಂಬರ್ ಅನ್ನೇ ಸ್ಟಿಕರ್ ಮಾಡಿಕೊಂಡಿರುವ ಫ್ಯಾನ್ಸ್ ತಮ್ಮ ವಾಹನಗಳಿಗೆ ಅಂಟಿಸಿಕೊಳ್ಳುತ್ತಿದ್ದಾರೆ. ಇದೀಗ ನಂಬರ್ ಪ್ಲೇಟ್ ಮರೆಮಾಚಿ ಸ್ಟಿಕ್ಕರ್ ಅಂಟಿಸಿದವರಿಗೆ ಸಂಕಷ್ಟ ಎದುರಾಗಿದೆ.
ಯಾವುದೇ ಕಾರಣಕ್ಕೂ ವಾಹನಗಳ ನಂಬರ್ ಪ್ಲೇಟ್ ಮರೆಮಾಚುವಂತಿಲ್ಲ. ನಂಬರ್ ಪ್ಲೇಟ್ ಇರುವ ಕಡೆ ಸ್ಟಿಕ್ಕರ್‌ಗಳನ್ನು ಅಂಟಿಸುವಂತಿಲ್ಲ. ಈ ರೀತಿ ಮಾಡಿದರೆ ಸಂಚಾರಿ ನಿಯಮ ಉಲ್ಲಂಘನೆ ಮಾಡಿದಂತೆ ಆಗುತ್ತದೆ. ಖೈದಿ ನಂಬರ್ ಸ್ಟಿಕ್ಕರ್ ಅಂಟಿಸಿ ನಂಬರ್ ಪ್ಲೇಟ್ ಮರೆ ಮಾಚಿರುವವರ ವಿರುದ್ಧ ಕೇಸ್ ದಾಖಲಿಸಲು ಟ್ರಾಫಿಕ್ ಪೊಲೀಸರು ಮುಂದಾಗಿದ್ದಾರೆ. ಡಿಫೆಕ್ಟಿವ್ ನಂಬರ್ ಪ್ಲೇಟ್ ಅಡಿ ಕೇಸ್ ದಾಖಲಾಗುತ್ತದೆ.