November 21, 2024

ಮುಖ್ಯಮಂತ್ರಿ ನವ ನಗರೋತ್ಥಾನ ಕ್ರಿಯಾ ಯೋಜನೆಗೆ 15 ತಿಂಗಳ ಹಿಂದೆಯೇ ಅನುಮೋದನೆ ದೊರೆತಿದ್ದರೂ ನಗರಾಭಿವೃದ್ಧಿ ಇಲಾಖೆಯು ಅನುದಾನ ಬಿಡುಗಡೆ ಮಾಡುತ್ತಿಲ್ಲ. ಈ ಅನುದಾನಕ್ಕಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ಶಾಸಕರು ವಿಕಾಸಸೌಧ ಮತ್ತು ವಿಧಾನಸೌಧ ಮೆಟ್ಟಿಲು ಹತ್ತಿ ಬಸವಳಿದು ಹೋಗಿದ್ದಾರೆ.

ಇನ್ನು ರಾಜಧಾನಿಯ ಅಭಿವೃದ್ಧಿಗಾಗಿ ಈ ಹಿಂದಿನ ಬಿಜೆಪಿ ಸರ್ಕಾರವು ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ಒದಗಿಸಿದ್ದ 8149.27 ಕೋಟಿ ರೂ ಪೈಕಿ. 485.06 ಕೋಟಿ ವೆಚ್ಚದ ಕಾಮಗಾರಿಗಳನ್ನು ಈಗಿನ ಕಾಂಗ್ರೆಸ್ ಸರಕಾರವು ಕೈಬಿಟ್ಟಿರುವ ನಡುವೆಯೇ ಪ್ರತಿಪಕ್ಷಗಳ ಶಾಸಕರು ಪ್ರತಿನಿಧಿಸಿರುವ ಕ್ಷೇತ್ರಗಳಿಗೆ 15 ತಿಂಗಳಾದರೂ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂಬ ವಿಚಾರ ಮುನ್ನೆಲೆಗೆ ಬಂದಿದೆ.

ಹೌದು, ಮುಖ್ಯಮಂತ್ರಿ ನವ ನಗರೋತ್ಥಾನ ಯೋಜನೆಯಡಿಯಲ್ಲಿ ಅನುದಾನ ಬಿಡುಗಡೆ ಮಾಡುವಲ್ಲಿ ನಗರಾಭಿವೃದ್ಧಿ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ಈ ಸಂಬಂಧ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಲವು ಶಾಸಕರು ಮನವಿ, ದೂರುಗಳನ್ನು ಸಲ್ಲಿಸಿದ್ದಾರೆ

ಬೆಂಗಳೂರಿನ ದಾಸರಹಳ್ಳಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಬಿಬಿಎಂಪಿ 8 ವಾರ್ಡ್‌ಗಳ ರಸ್ತೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ಆದೇಶದಂತೆ ದೊರೆತಿತ್ತು. ಮುಖ್ಯಮಂತ್ರಿಗಳ ಸರ್ಕಾರದ ನವ ನಗರೋತ್ಥಾನ ಯೋಜನೆಯಡಿಲ್ಲಿ 110 ಕೋಟಿ ರು. ಅಂದಾಜು ಕಾಮಗಾರಿಗಳ ಕ್ರಿಯಾ ಯೋಜನೆಗೆ ಅನುಮೋದನೆ ಸಿಕ್ಕಿತ್ತು.

110 ಕೋಟಿ ರು ಅನುದಾನದ ಪೈಕಿ ಈಗಾಗಲೇ ಬೃಹತ್ ರಸ್ತೆ ವಿಭಾಗದ ವತಿಇಂದ ಚೊಕ್ಕಸಂದ್ರ ವಾರ್ಡ್ ನಂ 39ರಲ್ಲಿ 20 ಕೋಟಿ ರು.ಗಳ ಕಾಮಗಾರಿಗಳಿಗೆ ಕಾರ್ಯಾದೇಶವಾಗಿದ್ದು ಕೆಲಸ ಪ್ರಗತಿಯಲ್ಲಿದೆ. ಇತ್ತೀಚೆಗೆ ಉಳಿದ 90 ಕೋಟಿ ರು.ಗಳ ಅನುದಾನದ ಪೈಕಿ 12 ಕೋಟಿ ರು.ಗಳ ಅನುದಾನದ ಮಂಜೂರಾತಿಯಾಗಿರುವುದು ತಿಳಿದು ಬಂದಿದೆ. ಉಳಿಕೆ 78 ಕೋಟಿ ರು. ಅನುದಾನಗಳಿಗೆ ಸಂಬಂಧಿಸಿದಂತೆ బిబిఎంపి ಮುಖ್ಯ ಆಯುಕ್ತರಿಗೆ 20230 ಜನವರಿ 12ರಲ್ಲಿ ನಗರಾಭಿವೃದ್ಧಿ ಇಲಾಖೆಗೆ ಅನುಮೋದನೆ ಕೋರಿ ಪ್ರಸ್ತಾವನೆ ಸಲ್ಲಿಸಿರುವುದು ಗೊತ್ತಾಗಿದೆ.ಅಕ್ಟೋಬರ್ 2021 ರಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅವಧಿಯಲ್ಲಿ ಬಿಜೆಪಿ ಸರ್ಕಾರವು ಬೆಂಗಳೂರಿಗೆ ಅಮೃತ್ ನಗರೋತ್ಥಾನ ಯೋಜನೆಯಡಿ ರೂ.6,000 ಕೋಟಿ ಅನುದಾನವನ್ನು ಘೋಷಿಸಿತ್ತು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ರಸ್ತೆ ಮೂಲಸೌಕರ್ಯ, ಕೆರೆಗಳು, ಮಳೆನೀರು ಚರಂಡಿಗಳು, ಆಸ್ಪತ್ರೆಗಳು ಮುಂತಾದ ಕ್ಷೇತ್ರಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕಿತ್ತು. ಅಮೃತ್‌ ನಗರೋತ್ಥಾನ ಯೋಜನೆಯಡಿ 2,146 ಕಿ.ಮೀ ರಸ್ತೆಗಳ ಅಭಿವೃದ್ಧಿ (ಒಳಚರಂಡಿ ಸೇರಿದಂತೆ), 67 ಕೆರೆಗಳು ಮತ್ತು 11 ಹೊಸ ಉದ್ಯಾನಗಳ ಅಭಿವೃದ್ಧಿ, ಅಸ್ತಿತ್ವದಲ್ಲಿರುವ 15 ಉದ್ಯಾನವನಗಳ ನವೀಕರಣ, 42 ಹೊಸ ಶಾಲಾ ಕಟ್ಟಡಗಳು ಮತ್ತು ಅಸ್ತಿತ್ವದಲ್ಲಿರುವ 26 ಶಾಲೆಗಳ ನವೀಕರಣ, ನಿರ್ಮಾಣ 40 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳು, 84 ಹಳೆಯ ಪ್ರಾಥಮಿಕ ಕೇಂದ್ರಗಳ ನವೀಕರಣ ಕೈಗೆತ್ತಿಕೊಂಡಿತ್ತು. ಕಾಮಗಾರಿ

2022-230 ಅಮೃತ ನಗರೋತ್ಥಾನ ಯೋಜನೆಯಡಿ ಹೊಸ ಶಾಲಾ ಕಟ್ಟಡಗಳ ನಿರ್ಮಾಣದ ರೂಪದಲ್ಲಿ ಬಿಬಿಎಂಪಿ ಶಾಲೆಗಳ ನವೀಕರಣವನ್ನು ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿಯ ಬಜೆಟ್‌ನಲ್ಲಿ ಉಲ್ಲೇಖಿಸಿತ್ತು. ಅಸ್ತಿತ್ವದಲ್ಲಿರುವ ಶಾಲೆಗಳಲ್ಲಿ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಮತ್ತು ತರಗತಿ ಕೊಠಡಿಗಳನ್ನು ನಿರ್ಮಿಸಲು ಕಟ್ಟಡಗಳನ್ನು ಖಚಿತಪಡಿಸಿಕೊಳ್ಳಲು ಬಳಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *