November 19, 2024

ಬ್ರಿಟಿಷ್​ ವಸಾಹತು ಕಾಲದ ಕ್ರಿಮಿನಲ್‌ ಕಾನೂನುಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದ್ದು, ಇಂದು ಜಾರಿಗೆ ಬಂದಿದೆ. ಹೊಸ ಕಾನೂನಿನ ಪ್ರಕಾರ ಹೊಸದಿಲ್ಲಿಯ ರೈಲ್ವೆ ನಿಲ್ದಾಣದ ಬಳಿ ರಸ್ತೆಯ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಬೀದಿ ವ್ಯಾಪಾರಿಯ ವಿರುದ್ಧ ಮೊದಲ ಎಫ್ಐಆರ್ ದಾಖಲಿಸಲಾಗಿದೆ.

ಹೊಸ ಕ್ರಿಮಿನಲ್ ಕೋಡ್‌ನ ಸೆಕ್ಷನ್ 285ರ ಅಡಿಯಲ್ಲಿ ಈ ಎಫ್ಐಆರ್ ದಾಖಲಿಸಲಾಗಿದೆ. ಈ ಕಾನೂನಿನ ಪ್ರಕಾರ ಯಾವುದೇ ಸಾರ್ವಜನಿಕ ರಸ್ತೆಗೆ ಅಡ್ಡಿಪಡಿಸಿದರೆ ಅಥವಾ ಸಾರ್ವಜನಿಕ ಮಾರ್ಗದಲ್ಲಿ ಸಂಚರಿಸುವ ಯಾವುದೇ ವ್ಯಕ್ತಿಗೆ ಅಪಾಯ ಅಥವಾ ಗಾಯವನ್ನು ಉಂಟು ಮಾಡಿದರೆ 5 ಸಾವಿರ ರೂಪಾಯಿವರೆಗೆ ದಂಡ ವಿಧಿಸಬಹುದಾಗಿದೆ.

ಗಸ್ತು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ರಸ್ತೆಯಲ್ಲಿ ನೀರಿನ ಬಾಟಲಿಗಳು ಮತ್ತು ಗುಟ್ಕಾ ಮಾರಾಟ ಮಾಡುವ ಬೀದಿ ವ್ಯಾಪಾರಿಯನ್ನು ಗುರುತಿಸಿದ ನಂತರ ಎಫ್ಐಆರ್ ದಾಖಲಿಸಲಾಗಿದೆ. ಬೀದಿ ವ್ಯಾಪಾರಿಯ ತಾತ್ಕಾಲಿಕ ಅಂಗಡಿಯು ರಸ್ತೆಗೆ ಅಡ್ಡವಾಗಿ ನಿಂತಿತ್ತು. ಅದನ್ನು ಸ್ಥಳಾಂತರಿಸಲು ಪೊಲೀಸ್‌ ಸಿಬ್ಬಂದಿ ಕೇಳಿಕೊಂಡರೂ ಒಪ್ಪದೇ ಇದ್ದಾಗ ಎಫ್ಐಆರ್ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *