August 19, 2025
reels-star

ರೀಲ್ಸ್​ ಗೀಳಿಗಾಗಿ ಗನ್‌​ ಮ್ಯಾನ್​ಗಳಿಗೆ ನಕಲಿ ಎಕೆ47 ಗನ್ ಕೊಡಿಸಿ, ಸಾರ್ವಜನಿಕರಲ್ಲಿ ಭಯ ಮೂಡಿಸುತ್ತಿದ್ದ ಅರುಣ್​ ಕಟಾರೆ(26) ಎಂಬಾತನನ್ನು ನಗರದ ಕೊತ್ತನೂರು ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜೂನ್ 9ರಂದು ಆರೋಪಿ, ನಕಲಿ ಗನ್‌ ಹಿಡಿದು ಬಾಡಿಗಾರ್ಡ್‌ಗಳೊಂದಿಗೆ ಕೊತ್ತನೂರು ಠಾಣಾ ವ್ಯಾಪ್ತಿಯ ಚೊಕ್ಕನಹಳ್ಳಿಯ ಲೀಲಾ ಹೋಟೆಲ್​ ಬಳಿ ಬಂದಿದ್ದಾನೆ. ಆತನನ್ನು ಕಂಡು‌ ಆತಂಕಗೊಂಡ ಸಾರ್ವಜನಿಕರು ಹೊಯ್ಸಳ ಗಸ್ತು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸದ್ಯ ಆರ್ಮ್ಸ್ ಕಾಯಿದೆ ಸೆ. 290 ಅಡಿಯಲ್ಲಿ ಪ್ರಕರಣ ದಾಖಲಿಸಿ ಈತನನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ, ನಕಲಿ ಗನ್ ಹಿಡಿದು ಏರಿಯಾದಲ್ಲಿ ಹವಾ ಸೃಷ್ಟಿಸಲು ಹೋದವನ ಗುಟ್ಟು ಬಯಲಾಗಿದೆ. ರೀಲ್ಸ್ ಶೋಕಿಗೆ ಬಿದ್ದ ಯುವಕನನ್ನು ಪೊಲೀಸರು ಜೈಲಿಗಟ್ಟಿದ್ದಾರೆ.

ಈತ ಬಾಡಿಗಾರ್ಡ್ಸ್‌ ಥರ ಮನುಷ್ಯರನ್ನಿಟ್ಟುಕೊಂಡು, ಅವರ ಕೈಲಿ ಎಕೆ 47 ಮಾದರಿಯ ನಕಲಿ ಗನ್ ಹಿಡಿಸಿ ರಸ್ತೆಯಲ್ಲಿ ಶೋ ಆಫ್‌ ಮಾಡುತ್ತಿದ್ದ. ಮೈಮೇಲೆ ನಕಲಿ ಚಿನ್ನ ಹೇರಿಕೊಳ್ಳುತ್ತಿದ್ದ. ಈತನ ರೀಲ್ಸ್​ಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ

Leave a Reply

Your email address will not be published. Required fields are marked *