August 19, 2025
vijaykarnataka (1)

ಸೇಫ್ ಸಿಟಿ ಯೋಜನೆಯಡಿ ಅಳವಡಿಸಿರುವ ಅತ್ಯಾಧುನಿಕ ಸಿಸಿಟಿವಿ ಕ್ಯಾಮೆರಾಗಳಿಂದ ಖದೀಮನೊಬ್ಬ ಎಚ್‌ಎಎ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ. ನೆಲ್ಲೂರಪುರದ ಮಲ್ಲಿಕಾರ್ಜುನ ಅಲಿಯಾಸ್ ಪುಟ್ಟ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಇನ್ನು ಆರೋಪಿಯಿಂದ 25 ಗ್ರಾಂ ಚಿನ್ನ ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಕೆಲ ದಿನಗಳ ಹಿಂದೆ ವಿಜ್ಞಾನ ನಗರ ಸಮೀಪ ಹಗಲು ಹೊತ್ತಿನಲ್ಲೇ ಮನೆಯೊಂದರಲ್ಲಿ ಕಳ್ಳತನ ನಡೆದಿತ್ತು.

ಈ ಬಗ್ಗೆ ತನಿಖೆಗಿಳಿದ ಪೊಲೀಸರು, ಸುತ್ತಮುತ್ತಲ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಸೀಲಿಸಿದರು. ಆಗ ವಿಜ್ಞಾನ ನಗರದಲ್ಲಿ ಸೇಫ್ ಸಿಟಿ ಯೋಜನೆಯಡಿ ಅಳವಡಿಸಿದ್ದ ಎಚ್‌ಡಿ ಗುಣಮಟ್ಟದ ಕ್ಯಾಮೆರಾದಲ್ಲಿ ಆರೋಪಿ ಮುಖ ಚಹರೆ ಪತ್ತೆಯಾಯಿತು. ಈ ಸುಳಿವು ಆಧರಿಸಿ ಕಾರ್ಯಾಚರಣೆಗಿಳಿದ ಖದೀಮ ಪುಟ್ಟ ಸಿಕ್ಕಿಬಿದ್ದ ಎಂದು ಪೊಲೀಸರು ಹೇಳಿದ್ದಾರೆ.

Leave a Reply

Your email address will not be published. Required fields are marked *