
ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಅವಳಿ ನಗರದ ವ್ಯಾಪ್ತಿಯಲ್ಲಿ ಸಾರ್ವಜನಿಕರ ಶಾಂತಿ ಭಂಗ ಮಾಡುವ/ ಸಾರ್ವಜನಿಕರಿಗೆ ಭೀತಿ ಉಂಟುಮಾಡುವ ಉದ್ದೇಶದಿಂದ ಮಾರಕಾಸ್ತ್ರಗಳನ್ನು ಇಟ್ಟುಕೊಂಡು ತಿರುಗಾಡುತ್ತಿರುವುದು ಕಂಡುಬಂದಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಹಾಗು ಕಾನೂನು ಸುವ್ಯವಸ್ಥೆ ಡಿಸಿಪಿ ಮಹಾನಿಂಗ ನಂದಾಗಾವಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ದಿನಾಂಕ 06.07.24 ರ 00.30 ಗಂಟೆ ಸುಮಾರಿಗೆ ಹುಬ್ಬಳ್ಳಿಯ ಅಮರಗೋಳ ಎಪಿಎಂಸಿ ಯಾರ್ಡ್ ನಲ್ಲಿ ಟಾಟಾ ಇಂಟ್ರಾ ಗೂಡ್ಸ್ ವಾಹನ ದಲ್ಲಿ ಮಾರಕಾಸ್ತ್ರವನ್ನು ಇಟ್ಟುಕೊಂಡು ಸಂಚರಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿದ ಎಪಿಎಂಸಿ ನವನಗರ ಪೊಲೀಸ್ ಠಾಣೆಯ ಪಿಐ ಸಮಿವುಲ್ಲಾ ಕೆ. ನೇತೃತ್ವದ ಸಿಬ್ಬಂದಿಗಳನ್ನು ಒಳಗೊಂಡ ತಂಡವು ದಾಳಿ ನಡೆಸಿದ್ದು, ಪರಿಶೀಲನೆ ವೇಳೆ ವಾಹನದಲ್ಲಿ ಎರಡು ಫುಟ್ ಉದ್ಧದ ತಲವಾರ್ ಕಂಡುಬಂದಿದ್ದು, ಮಾರಕಾಸ್ತ್ರವನ್ನು ವಶಪಡಿಸಿಕೊಂಡು, ಆರೋಪಿಯನ್ನ ಬಂಧಿಸಿ ಶಸ್ತ್ರಾಸ್ತ್ರ ಕಾಯ್ದೆ ಪ್ರಕಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿರುತ್ತದೆ.
ಆರೋಪಿ ಯನ್ನು ರಾಯಪುರದ ತಿಪ್ಪಣ್ಣ ತಂದೆ ಭೀಮಪ್ಪ ಶಿಶನಳ್ಳಿ ಎಂದು ಗುರುತಿಸಲಾಗಿದ್ದು.APMC ನವನಗರ ಪೊಲೀಸ್ ಠಾಣೆಯ ಪಿಐ ನೇತೃತ್ವದ ತಂಡದ ಕಾರ್ಯವೈಖರಿಯನ್ನು ಪೊಲೀಸ ಆಯುಕ್ತರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.