ಸಾರ್ವಜನಿಕರಿಗೆ ಉಪಟಳವಾಗುತ್ತಿದ್ದ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಹುಬ್ಬಳ್ಳಿ ಧಾರವಾಡ ನಗರ ಪೊಲೀಸರಿಂದ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 7.7.2024 ರಂದು ತಡರಾತ್ರಿ ಪೊಲೀಸ್ ಏರಿಯಾ ಡಾಮಿನೇಷನ್ ಕ್ರಮ ಕೈಗೊಳ್ಳಲಾಯ್ತು.
ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ 20 ಜನ ರೌಡಿಶೀಟರ್ ಗಳನ್ನು ಹಾಗೂ ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಖಾಲಿ ಇರುವ ಲೇಔಟ್ ಗಳಲ್ಲಿ, ರಸ್ತೆಗಳಲ್ಲಿ ಕುಳಿತು ಮಧ್ಯವನ್ನು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಮಾಡುತ್ತಿದ್ದ 45 ಜನರನ್ನೂ ವಶಕ್ಕೆ ಪಡೆಯಲಾಗಿದೆ.
ಒಟ್ಟು 50 ಜನರ ವಿರುದ್ಧ ಕೆಪಿ Act ಅಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ ಮತ್ತು ಸೂಕ್ತ ಎಚ್ಚರಿಕೆಯನ್ನೂ ನೀಡಲಾಗಿದೆ. ಇವರುಗಳ ಈ ಹಿಂದಿನ ಹಾಗೂ ಇಂದಿನ ನಡವಳಿಕೆ ಹಾಗೂ ಅವರ ಚಟುವಟಿಕೆಯ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು, ಇವರುಗಳ ಮೇಲೆ ನಿಗಾ ಇಡಲಾಗುವುದು. ಅಲ್ಲದೇ ಇವರ ಪೋಷಕರಿಗೆ ಕೂಡ ಇವರುಗಳಿಗೆ ಸೂಕ್ತ ಬುದ್ಧಿವಾದ ಹೇಳುವಂತೆ ಸೂಚನೆ ನೀಡಲಾಗಿದೆ.
ಮಾನ್ಯ ಪೊಲೀಸ್ ಕಮೀಷನರ್ ಶ್ರೀ ಶಶಿಕುಮಾರ್ IPS ಇವರ ಆದೇಶದಂತೆ ಡಿಸಿಪಿ (L & O) ಡಿಸಿಪಿ (C & T) ಹಾಗೂ ಸಿಸಿಬಿ, ಉತ್ತರ ಉಪ ವಿಭಾಗದ ಎಲ್ಲ ಎಸಿಪಿ ಮತ್ತು PI ರವರುಗಳು ಹಾಗೂ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಈ ರೀತಿಯ ಕಾರ್ಯವನ್ನು ಮುಂದೆಯೂ ನಿರಂತರವಾಗಿ ಕೈಗೊಳ್ಳಲಾಗುವುದು.