November 21, 2024

ಬಿಪಿಎಲ್‌ ಕಾರ್ಡ್‌ ಗಳನ್ನು ಅನರ್ಹರು ಹೊಂದಿರುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಮಹತ್ವದ ಸೂಚನೆಗಳನ್ನು ನೀಡಿದ್ದಾರೆ. ರಾಜ್ಯದಲ್ಲಿ ಒಟ್ಟು ಶೇ. 80 ರಷ್ಟು ಬಿಪಿಎಲ್‌ ಕಾರ್ಡುಗಳನ್ನು ಹೊಂದಿದ್ದಾರೆ. ಆದರೆ ನೆರೆ ರಾಜ್ಯ ತಮಿಳುನಾಡಿನಲ್ಲಿ ಶೇ.40 ದಷ್ಟು ಮಂದಿ ಬಿಪಿಎಲ್‌ ಕಾರ್ಡ್‌ ಹೊಂದಿದ್ದಾರೆ.

ವಿಧಾನಸೌಧದಲ್ಲಿ  ನಡೆದ ಜಿಲ್ಲಾಧಿಕಾರಿ ಹಾಗೂ ಸಿಇಓಗಳ ಜೊತೆಗಿನ ಸಭೆಯಲ್ಲಿ ಸಿಎಂ ಮಾತನಾಡಿ, ರಾಜ್ಯದಲ್ಲಿ ಶೇ. 80 ರಷ್ಟು ಬಿಪಿಎಲ್‌ ಕಾರ್ಡುಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು. ಆದರೆ ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ನೀಡಿದ್ದೇವೆ. ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್‌ ಕಾರ್ಡು ಒದಗಿಸಬೇಕು ಎಂದು ಸಿದ್ದರಾಮಯ್ಯ  ಸೂಚಿಸಿದರು.

Leave a Reply

Your email address will not be published. Required fields are marked *