ಬೆಂಗಳೂರು: 2021-23ರ ಅವಧಿಯಲ್ಲಿ ನಿಗಮದ ಟರ್ಮಿನಲ್‌ಗಳನವೀಕರಣಮತ್ತು ನಿರ್ವಹಣೆ ಗುತ್ತಿಗೆಯಲ್ಲಿ 47.10 ಕೋಟಿ ರು. ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಲ್ಸನ್ ಗಾರ್ಡನ್ ಠಾಣೆಗೆ ನಿಗಮದ ಹಾಲಿ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್.ಶಿವಪ್ರಕಾಶ್ ದೂರು ನೀಡಿದ್ದರು. ಈ ದೂರಿನ ಮೇರೆಗೆ ಅಪರಾಧಿಕ ಸಂಚು ಹಾಗೂ ವಂಚನೆ, ನಕಲಿ ದಾಖಲೆ ಸೃಷ್ಟಿ ಸೇರಿದಂತೆ ಇತರೆ ಆರೋಪಗಳಡಿ ಎಫ್ ಐಆರ್‌ದಾಖಲಾಯಿತು. ಬಳಿಕ ಪ್ರಕರಣವನ್ನು ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ವಹಿಸಿತ್ತು.
ಇದರ ಬೆನ್ನಲ್ಲೇ ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ಲಿ. ನಿಗಮದ 47.10 ಕೋಟಿ ರು. ಅವ್ಯವಹಾರ ಪ್ರಕರಣ ಸಂಬಂಧ ನಿಗಮದ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿಯ ಮಾಜಿ ಶಾಸಕ ಡಿ.ಎಸ್.ವೀರಯ್ಯ ಅವರನ್ನು ರಾಜ್ಯ ಅಪರಾಧ ತನಿಖಾ ದಳದ (ಸಿಐಡಿ) ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬಂಧನ ಭೀತಿಯಿಂದ ನ್ಯಾಯಾಲಯದಲ್ಲಿ ಪಡೆದಿದ್ದ ಮಧ್ಯಂತರ ನಿರೀಕ್ಷಣಾ ಜಾಮೀನು ರದ್ದಾದ ಬೆನ್ನಲ್ಲೇ ವೀರಯ್ಯ ಅವರನ್ನು ಮೈಸೂರು ರಸ್ತೆಯಲ್ಲಿ ಸಿಐಡಿ ಪೊಲೀಸರು ಸೆರೆ ಹಿಡಿದಿದ್ದಾರೆ ಎಂದು ತಿಳಿದು ಬಂದಿದೆ.