October 13, 2025
nagendradp-1720760918

ಬೆಂಗಳೂರು: ಮಾಜಿ ಸಚಿವ ನಾಗೇಂದ್ರ ಅವರನ್ನು ಹೆಚ್ಚಿನ ವಿಚಾರಣೆಗೆ 6 ದಿನಗಳ ಕಾಲ .ಡಿ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಂತರ ರೂ. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರನ್ನು ಬಂಧಿಸಲಾಗಿತ್ತು.

ಹೆಚ್ಚಿನ ವಿಚಾರಣೆ, ಮಹಜರು ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ನಾಗೇಂದ್ರ ಅವರನ್ನು ಯಲಹಂಕದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಜು.18 ವರೆಗೆ .ಡಿ ಕಸ್ಟಡಿಗೆ ನೀಡಿ ನ್ಯಾಯಾದೀಶರು ಆದೇಶಿಸಿದ್ದಾರೆ. ಬಳಿಕ ನ್ಯಾಯಾಧೀಶರ ಮನೆಯಿಂದ ಶಾಂತಿನಗರದಿಂದ .ಡಿ ಕಚೇರಿಗೆ ಆರೋಪಿಯನ್ನು .ಡಿ ಅಧಿಕಾರಿಗಳು ಕರೆದೊಯ್ದಿದ್ದಾರೆ.

ನಿಗಮದಲ್ಲಿ ನೂರಾರು ಕೋಟಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕ ಕಾಂಗ್ರೆಸ್‌ ಶಾಸಕ ನಾಗೇಂದ್ರರನ್ನು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಶುಕ್ರವಾರ ಬಂಧಿಸಿದರು. ಬಳಿಕ ರಾತ್ರಿ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು

Leave a Reply

Your email address will not be published. Required fields are marked *