November 28, 2025
Screenshot 2024-07-13 134505

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇರ ಪಾತ್ರ ಇದ್ದೇ ಇದೆ ಎಂದು ಸಚಿವ ಪ್ರಲ್ಹಾದ ಜೋಶಿ ಆರೋಪ ಮಾಡಿದರುಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣಕಾಸು ಖಾತೆ ಹೊಂದಿರುವ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ಬಾರದೇ 187 ಕೋಟಿ ರೂಪಾಯಿಯಷ್ಟು ದೊಡ್ಡ ಮೊತ್ತದ ಹಣ ವರ್ಗಾವಣೆ ಆಗಲು ಸಾಧ್ಯವೇ ಇಲ್ಲಎಂದು ಜೋಶಿ ಹೇಳಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಹಗರಣದಲ್ಲಿ ಸಿಎಂ ಅವರಿಗೂ SIT ನೋಟಿಸ್ ನೀಡಬೇಕು ಮತ್ತು ಅವರ ಪಾತ್ರದ ಬಗ್ಗೆಯೂ ತನಿಖೆ ನಡೆಸಬೇಕು. ಇನ್ನು, ಮುಡಾ ಹಗರಣದಲ್ಲಿ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾತ್ರವಿದೆ. ಅವರ ಹಸ್ತಕ್ಷೇಪ, ಭಾಗಿ ಇಲ್ಲದೇ ಇರಲು ಸಾಧ್ಯವಿಲ್ಲ. ಹಾಗಾಗಿ ಇದರಲ್ಲಿ ಸಿಎಂ ವಿರುದ್ಧ ನೇರ ತನಿಖೆ ಆಗಬೇಕುಎಂದು ಪ್ರಲ್ಹಾದ ಜೋಶಿ ಒತ್ತಾಯಿಸಿದರು.

 

Leave a Reply

Your email address will not be published. Required fields are marked *