October 13, 2025
WhatsApp Image 2024-07-15 at 16.53.52_075cd6f4

ಹುಬ್ಬಳ್ಳಿ:ನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಹಾಗೂ ಸೇವನೆ ಮಾಡುತ್ತಿದ್ದ ಚೈನ್ ಲಿಂಕ್’ಬೇಧಿಸುವಲ್ಲಿ ಹುಬ್ಬಳ್ಳಿಯ ಶಹರ ಠಾಣೆಯ ಪೊಲೀಸರು ಸಕ್ಸಸ್ ಆಗಿದ್ದಾರೆ. ಹುಬ್ಬಳ್ಳಿಯ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ರೈಲ್ವೇ ನಿಲ್ದಾಣದ ಬಳಿಯಲ್ಲಿ ಬೇರೆ ರಾಜ್ಯದಿಂದ ಗಾಂಜಾ ತಂದು,ನಗರದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ,ಶಹರ ಠಾಣೆಯ ಇನ್ಸ್ಪೆಕ್ಟರ್ ತಹಶೀಲ್ದಾರ ನೇತೃತ್ವದ ತಂಡ ಆರೋಪಿಗಳನ್ನು ಬಂಧನ ಮಾಡಿದ್ದಾರೆ.

ಸದ್ಯ ಆರೋಪಿಗಳಿಂದ 1 ಕೆಜಿ ಗೂ ಅಧಿಕ ಗಾಂಜಾ ವಶಕ್ಕೇ ಪಡೆದಿದ್ದು ಸದ್ಯ ಗಾಂಜಾ ಮಾರಾಟ ಹಾಗೂ ಸೇವನೆ ಮಾಡುತ್ತಿದ್ದ ಆರೋಪದಡಿಯಲ್ಲಿ 13 ಜನರ ಮೇಲೆ ಶಹರ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಹರ ಪೊಲೀಸರ ಕಾರ್ಯಕ್ಕೆ ಕಮಿಷನರ್ ಶಶಿಕುಮಾರ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *