ಅಂಕೋಲಾ ತಾಲ್ಲೂಕಿನ ವಾಸರಕುದ್ರಿಗೆ ಗ್ರಾಮಪಂಚಾಯತ ಶಿರೂರು ಗ್ರಾಮದಲ್ಲಿ ಭೂಕುಸಿತ ಸಂಭವಿಸಿರುತ್ತದೆ. ಸದ್ರಿ ಭೂಕುಸಿತದಲ್ಲಿ ಎರಡು ಗ್ಯಾಸ್ ಟ್ಯಾಂಕರ್ ಗಂಗಾವಳಿ ನದಿಯಲ್ಲಿ ಉರುಳಿ ಬಿದ್ದಿದ್ದು, ಸದ್ರಿ ಗ್ಯಾಸ್ ಟ್ಯಾಂಕರ್ ಗಳು ಸೋರಿಕೆಯಾಗುವ ಸಾಧ್ಯತೆಯಿರುವುದರಿಂದ, ನದಿ ದಡದಲ್ಲಿರುವ ಮನೆಗಳಲ್ಲಿ ವಾಸವಿರುವ ಸಾರ್ವಜನಿಕರು/ಕುಟುಂಬಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವುದು ಅತ್ಯವಶಕವಾಗಿರುತ್ತದೆ.
ಅದ್ದರಿಂದ ಸಂಬಂಧಪಟ್ಟ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಅಡಳಿತಾಧಿಕಾರಿಗಳು,ಕಂದಾಯ ನಿರೀಕ್ಷಕರು ಹಾಗೂ ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರರು, ಸಹಾಯಕ ಆಯುಕ್ತರು ಕೂಡಲೇ ಮುನ್ನೆಚರಿಕೆ ಕ್ರಮವಾಗಿ ನದಿ ದಡದಲ್ಲಿರುವ ಎಲ್ಲಾ ಮನೆಗಳಲ್ಲಿರುವ ಕುಟುಂಬದ ಸದಸ್ಯರನ್ನು ಸುರಕ್ಷಿತ ಸ್ಥಳಗಳಾದ ಕಾಳಜಿ ಕೇಂದ್ರದಲ್ಲಿ ಸ್ಥಳಾಂತರಿಸಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲು ಮತ್ತು ಕಟ್ಟುನಿಟ್ಟಿನ ಮುನ್ನೆಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ.