
ಬೆಂಗಳೂರು: ಕರ್ನಾಟಕ ಪ್ಲಾಟ್‌ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ) ವಿಧೇಯಕದ ಕುರಿತಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಕಾರ್ಮಿಕ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಪ್ಲಾಟ್‌ಫಾರಂ ಆಧಾರಿತ ಗಿಗ್ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಸಾಮಾಜಿಕ ಭದ್ರತೆ, ಆರೋಗ್ಯ ಮತ್ತು ಸುರಕ್ಷತೆಗಾಗಿ ಹೊಸ ಮಸೂದೆ ಮಂಡಿಸಲು ಸರ್ಕಾರ ತಯಾರಿ ನಡೆಸಿದೆ.
ಕಂಪನಿಗಳು ಅನುಸರಿಸಬೇಕಾದ ಔದ್ಯೋಗಿಕ ಸುರಕ್ಷತೆ ಮತ್ತು ಆರೋಗ್ಯ (OSH) ಮಾನದಂಡಗಳ ಷರತ್ತುಗಳನ್ನು ಕರಡು ಒಳಗೊಂಡಿದೆ. ರಾಜ್ಯದಲ್ಲಿ ಆಹಾರ ಮತ್ತು ಸೇವಾ ಸಂಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳು ರಾಜ್ಯದ ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿಸಿಕೊಳ್ಳಬೇಕು,
ಯಾವುದೇ ಗಿಗ್ ನೌಕರರನ್ನು ವಿನಾಕಾರಣ ವಜಾಗೊಳಿಸುವಂತಿಲ್ಲ. ವಿವಾದ ಪರಿಹಾರವನ್ನು ಒದಗಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳುವುದು ಪ್ರಮುಖ ಅವಶ್ಯಕತೆಗಳಲ್ಲಿ ಒಂದಾಗಿದೆ.ಇಂದು ನಡೆದ ಸಭೆ ವೇಳೆ ಕಾರ್ಮಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಮೊಹಮ್ಮದ್ ಮೊಹಸೀನ್, ಕಾರ್ಮಿಕ ಆಯುಕ್ತರಾದ ಶ್ರೀ ಎಚ್ ಎನ್ ಗೋಪಾಲಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.