September 8, 2024
ನವಲಗುಂದ : ಉತ್ತರ ಕರ್ನಾಟಕದ ಕುಡಿಯುವ ನೀರಿನ ಜೀವನಾಡಿ ಮಹದಾಯಿ ಕಳಸಾ-ಬಂಡೂರಿ ಜಾರಿ ಮಾಡಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಅರಣ್ಯ, ಪರಿಸರ ಹಾಗೂ ರಾಷ್ಟ್ರೀಯ ವನ್ಯಜೀವಿ ಇಲಾಖೆಯಿಂದ ಅನುಮತಿ ಕೊಡಿಸಲು ಇವರಿಗೇನು ತೊಂದರೆ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಹದಾಯಿ ಹೋರಾಟಗಾರ, ನವಲಗುಂದ ವಿದಾನಸಭಾ ಕ್ಷೇತ್ರದ ಶಾಸಕ ಎನ್.ಹೆಚ್. ಕೋನರಡ್ಡಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಸಿದರು.
ಅವರು ಜುಲೈ 21 ನವಲಗುಂದ-ನರಗುಂದ ರೈತ ಬಂಡಾಯದ ರೈತ ಹುತಾತ್ಮ ದಿನಾಚರಣೆ ರೈತ ಹುತಾತ್ಮ ಬಸಪ್ಪ ಲಕ್ಕುಂಡಿ ಅವರ ನವಲಗುಂದದಲ್ಲಿರುವ ವೀರಗಲ್ಲಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು ಗೋವಾ ಸರ್ಕಾರ ಒತ್ತಡ ಮೆರೆಗೆ ದಿ-7 ರಂದು ಕೇಂದ್ರ ಸರ್ಕಾರ ರಚಿಸಿರುವ ಕೇಂದ್ರ ಮಹದಾಯಿ ಪ್ರವಾಹ ಪ್ರಾಧಿಕಾರದ ಅಧ್ಯಕ್ಷರ ನೇತೃತ್ವದಲ್ಲಿ ಅಚ್ಚುಕಟ್ಟು ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುವ ಸಮಯದಲ್ಲಿಯೇ ಮಹದಾಯಿ ಪ್ರದೇಶಕ್ಕೆ ಭೇಟಿ ನೀಡಿ ವಿನಾಕಾರಣ ಕಾಲಹರಣ ಮಾಡುವ ಉದ್ದೇಶ ಕೇಂದ್ರ ಸರ್ಕಾರಕ್ಕೆ ಇದೆಯೇ ಎಂದು ಪ್ರಶ್ನಿಸಿದರು. ಈ ವಿಷಯವನ್ನು ದಿನಾಂಕ: 23 ರಂದು ವಿಧಾನಸಭೆಯಲ್ಲಿ ಚರ್ಚಿಸಲು ವಿಧಾನಸಭೆಯ ಅಧ್ಯಕ್ಷರಾದ ಯು.ಟಿ. ಖಾದರಾವರು ನನಗೆ ಅನುಮತಿ ನೀಡಿದ್ದಾರೆ. ಅಲ್ಲಿ ಈ ವಿಷಯವನ್ನು ಚರ್ಚಿಸುತ್ತೇನೆ ಎಂದರು.
ಆದರೆ, ಕೆಲ ದಿನಗಳ ಹಿಂದೆ ಕೇಂದ್ರ ಸರ್ಕಾರದ ಬೆಂಬಲದಿಂದ ಮಹಾರಾಷ್ಟ್ರ ಸರ್ಕಾರ ಮಹದಾಯಿ ನದಿಯ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ “ವಿರ್ಡಿ” ಆಣೆಕಟ್ಟು ಎತ್ತರ ಹೆಚ್ಚಿಸಲು ಕೇಂದ್ರ ಸರ್ಕಾರದ ಒಪ್ಪಿಗೆ ಪಡೆಯದೆ ಆಣೆಕಟ್ಟು ಎತ್ತರಿಸಲು ಡಿ.ಪಿ.ಆರ್‌ ತಯಾರಿಸಿ ಕಾಮಗಾರಿ ಪ್ರಾರಂಭಿಸುವ ಹುನ್ನಾರವನ್ನು ರೈತರು ಹಾಗೂ ಹೋರಾಟಗಾರರು ವಿರೋಧಿಸುತ್ತೇವೆ. ಈ ವಿಷಯವನ್ನು ರಾಜ್ಯದ ಬಿಜೆಪಿ ಸಂಸದರು ಗಂಭೀರವಾಗಿ ತೆಗೆದುಕೊಂಡು ಅನುಮತಿ ಕೊಡಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದರು.
ಈಗಾಗಲೇ ಮಹದಾಯಿ ನ್ಯಾಯಧೀಕರಣದ ನ್ಯಾಯಮೂರ್ತಿ ಜೆ.ಎಂ. ಪಾಂಚಾಳ ಅವರು ದಿನಾಂಕ: 14/08/2018 ರಂದು ತೀರ್ಪು ನೀಡಿ ಕರ್ನಾಟಕಕ್ಕೆ 13.42 ಟಿಎಂಸಿ ನೀರು ಉಪಯೋಗಿಸಲು ಅನುಮತಿ ನೀಡಿ ಆದೇಶಿಸಿದೆ. ಅದರಲ್ಲಿ ಯೋಜನೆ ಜಾರಿಗೊಳಿಸಲು ಕಳಸಾ ನಾಲಾ ತಿರುವು ಯೋಜನಯಡಿ 1.72 ಟಿಎಂಸಿ ಹಾಗೂ ಬಂಡೂರ ನಾಲಾ ತಿರುವು ಯೋಜನೆ ಅಡಿ 2.18 ಟಿಎಂಸಿ ಕುಡಿಯುವ ನೀರಿನ (ಲಿಫ್ಟ್ ಯೋಜನೆಗಳು) ಮಾಡಲು ಯಾವದೇ ತೊಂದರೆ ಇಲ್ಲ.
ಈಗಾಗಲೇ ಯೋಜನೆ ಜಾರಿ ಮಾಡಲು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ದಿನಾಂಕ: 27/02/2020 ರಂದು ಗೆಜೆಟ್ ಅಧಿಸೂಚನೆ ಹೊರಡಿಸಿದೆ. ನಂತರ ದಿನಾಂಕ: 29/12/2022 ರಂದು ಡಿಪಿಆರ್ ತಯಾರಿಸಲು ಅನುಮತಿ ಸಹ ನೀಡಿದೆ. ಆದರೂ ಕೂಡ ಕೇಂದ್ರ ಸರ್ಕಾರ ಅರಣ್ಯ ಇಲಾಖೆಯ ಪರಿಸರ ಹಾಗೂ ರಾಷ್ಟ್ರೀಯ ವನ್ಯಜೀವಿ ಇಲಾಖೆಯಿಂದ ಅನುಮತಿ ಕೊಡಿಸಲು ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಹಾಗೂ ರಾಜ್ಯದ ಸಂಸದರು ಪ್ರಯತ್ನಿಸಬೇಕೆಂದು ಮನವಿ ಮಾಡಿದರು. ರಾಜ್ಯದ ನೆಲ ಜಲದ ಪ್ರಶ್ನೆ ಬಂದಾಗ ಅಂದಿನ ಕೇಂದ್ರ ಸಚಿವರಾಗಿದ್ದ ದಿ. ಅನಂತಕುಮಾರ ಅವರು ಪಕ್ಷ ಹಾಗೂ ರಾಜಕೀಯವನ್ನು ಲೆಕ್ಕಕ್ಕೆ ತೆಗೆದುಕೊಳ್ಳದೇ ಒಗ್ಗಟ್ಟಾಗಿ ನಿರ್ಣಯ ತೆಗೆದುಕೊಂಡು ರಾಜ್ಯದ ಹಿತ ಕಾಪಾಡಲು ಪ್ರಯತ್ನಿಸಬೇಕು. ಆ ಸ್ಥಾನವನ್ನು ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರು ವಹಿಸಿಕೊಳ್ಳಬೇಕು.
ಕೇಂದ್ರ ಸರ್ಕಾರದ ಅನುಮತಿ ನೀಡಿದ ತಕ್ಷಣವೇ ರಾಜ್ಯ ಸರ್ಕಾರ ಕಾಮಗಾರಿ ಪ್ರಾರಂಭಿಸುತ್ತೇವೆ:
ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನೀರಾವರಿ ಸಚಿವರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಕೇಂದ್ರ ಸರ್ಕಾರ ಅನುಮತಿ ನೀಡುವ ನಿರೀಕ್ಷೆಯ ಮೇಲೆ ಕಳಸಾ-ಬಂಡೂರಿ ನಾಲಾ ತಿರುವ ಯೋಜನೆಗಳಿಗೆ (ಲಿಫ್ಟ್ ಯೋಜನೆಗಳು) ಟೆಂಡರ್ ಪ್ರಕ್ರಿಯೆ ಅಂತಿಮಗೊಳಿಸಿ ಕೇಂದ್ರ ಸರ್ಕಾರ ಅರಣ್ಯ ಮತ್ತು ರಾಷ್ಟ್ರೀಯ ವನ್ಯಜೀವಿ ಪರಿಸರ ಇಲಾಖೆಯಿಂದ ಅನುಮೋದನೆ ಪಡೆದ ತಕ್ಷಣ ಗುತ್ತಿಗೆದಾರರೊಂದಿಗೆ ಒಪ್ಪಂಡ ಮಾಡಿಕೊಂಡು ಕಳಸಾ-ಬಂಡೂರಿ  ಕಾಮಗಾರಿ ಪ್ರಾರಂಭಿಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದರು.
ಇಂದು ನವಲಗುಂದ-ನರಗುಂದ ರೈತ ಬಂಡಾಯದ ರೈತ ಹುತಾತ್ಮ ದಿನಾಚರಣೆ ಆಚರಣೆ ಮಾಡಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ಧಾರವಾಡ, ಬೆಳಗಾವಿ, ಗದಗ ಹಾಗೂ ಬಾಗಲಕೋಟ 4 ಜಿಲ್ಲೆಗಳ 13 ತಾಲ್ಲೂಕುಗಳು ಕುಡಿಯುವ ನೀರಿನ ಈ ಯೋಜನೆಗೆ ಪ್ರಧಾನ ಮಂತ್ರಿಗಳು ಮಧ್ಯ ಪ್ರವೇಶಿಸಿ ನ್ಯಾಯಾಲಯದ ಆದೇಶದ ಪ್ರಕಾರ ನ್ಯಾಯ ನೀಡಬೇಕೆಂದು ಕೋನರಡ್ಡಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಗವಿಮಠದ ಸ್ವಾಮಿಗಳಾದ ಬಸವಲಿಂಗ ಮಹಾಸ್ವಾಮಿಗಳು, ಮೇಲುಕೋಟೆ ಶಾಸಕ ದರ್ಶನ ಪುಟ್ಟಣ್ಣಯ್ಯ, ಪರಿಸರವಾದಿ ಸುರೇಶ ಹೆಭ್ಳೀಕರ, ಸಂಯುಕ್ತ ಕಿಸಾನ ಮೋರ್ಚಾ ಅಧ್ಯಕ್ಷ ಬಸವರಾಜಪ್ಪ, ಪ್ರೋ: ಹುದ್ದಾರ, ಸುರೇಶ ಕುಲಕರ್ಣಿ, ಡಿ.ಕೆ. ಹಳ್ಳದ, ಲೋಕನಾಥ ಹೆಬಸೂರ, ಶಂಕರ ಅಂಬಲಿ, ಸುಭಾಸಚಂದ್ರಗೌಡ ಪಾಟೀಲ, ಯಲ್ಲಪ್ಪ ದಾಡಿಬಾಯಿ, ಶ್ರೀಮತಿ ಶಾಂತಾ ಚಿಕ್ಕನರಗುಂದ ವಕೀಲಕರು, ನಂದಿನಿ ಹಾದಿಮನಿ ಪುರಸಭೆ ಸದ್ಯಸರು ಇದ್ದರು

Leave a Reply

Your email address will not be published. Required fields are marked *