
ಕನ್ನಡದ ನೇತ್ರಾವತಿ ಧಾರವಾಹಿ ನಟ ಸನ್ನಿ ಮಹಿಪಾಲ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ಗರ್ಭಿಣಿ ಪತ್ನಿ ಮೇಲೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಕೆಲ ತಿಂಗಳ ಹಿಂದೆ ಮದುವೆಯಾಗಿದ್ದ ಮಹಿಪಾಲ್ ಇದೀಗ ಮತ್ತೊಬ್ಬ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ಪತ್ನಿ ನಿನ್ನೆ ಮಹಿಪಾಲ್ ಮನೆಗೆ ಹೋದಾಗ ಎರಡು ತಿಂಗಳ ಗರ್ಭಿಣಿ ಪತ್ನಿ ಮೇಲೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಗಲಾಟೆ ಬಳಿಕ ಮಹಿಪಾಲ್ ತಾನೇ ಕಾರು ಚಲಾಯಿಸಿಕೊಂಡು ಖಾಸಗಿ ಆಸ್ಪತ್ರೆಗೆ ಪತ್ನಿಯನ್ನು ಸೇರಿಸಿದ್ದು, ಸದ್ಯ ಪತ್ನಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಹೆಚ್ ಎಎಲ್ ಪೊಲೀಸ್ ಠಾಣೆಯಲ್ಲಿ ನಟ ಮಹಿಪಾಲ್ ವಿರುದ್ಧ ದೂರು ದಾಖಲಾಗಿದೆ.