
50 ವರ್ಷ ಮೇಲ್ಪಟ್ಟ ಮಹಿಳಾ ಶಿಕ್ಷಕರಿಗೆ ವರ್ಗಾವಣೆಯಿಂದ ವಿನಾಯಿತಿ ನೀಡುವ ಕರ್ನಾಟಕ ಸ್ಟೇಟ್ ಸಿವಿಲ್ ಸರ್ವೀಸಸ್ ಆಕ್ಟ್ ನ ನಿಯಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಅಲ್ಲದೇ, 50 ವರ್ಷ ದಾಟಿದ್ದ ಇಬ್ಬರು ಶಿಕ್ಷಕಿಯರನ್ನು ವರ್ಗಾವಣೆ ಮಾಡಿದ್ದ ಶಿಕ್ಷಣ ಇಲಾಖೆ ಆಯುಕ್ತರ ಆದೇಶವನ್ನು ರದ್ದು ಮಾಡಿದ್ದ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (ಕೆಎಸ್‌ಎಟಿ) ಆದೇಶವನ್ನು ಎತ್ತಿಹಿಡಿದಿದೆ.
ಶಿಕ್ಷಕರ ವರ್ಗಾವಣೆಯನ್ನು ರದ್ದುಪಡಿಸಿರುವ ಕೆಎಟಿ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಎಸ್.ಜಿ ಪಂಡಿತ್ ಅವರಿದ್ದ ವಿಭಾಗೀಯ ಪೀಠ ಈ ಮಹತ್ವದ ಆದೇಶ ನೀಡಿದೆ.