ಮೇಕೆದಾಟು ಯೋಜನೆಗಾಗಿ ನಾನು ಪ್ರಯತ್ನ ಮಾಡುತ್ತೇನೆ. ಒಂದೇ ರಾತ್ರಿಯಲ್ಲಿ ಮೇಕೆದಾಟು ಯೋಜನೆ ಮಾಡೋಕೆ ಆಗುತ್ತಾ? ಕರ್ನಾಟಕದ ನಾಲ್ಕು ಜಲಾಶಯಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಹಣ ಕೊಟ್ಟಿಲ್ಲ. ಕರ್ನಾಟಕದವರೇ ಕಟ್ಟಿರುವುದು. ಕಾವೇರಿ ನೀರು ಬಿಡುವ ವಿಚಾರವಾಗಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಜತೆ ಚರ್ಚೆ ಮಾಡಿದ್ದೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ಮಾಡಿದರು. ಈಗ ರಾಜ್ಯದಲ್ಲಿ ಮಳೆಯಾಗಿದ್ದರಿಂದ ಹೆಚ್ಚು ನೀರು ಹೋಗುತ್ತಿದೆ. ಈ ವಿಚಾರಕ್ಕೆ ಟೆಕ್ನಿಕಲ್ ಆಗಿ ಚರ್ಚೆ ಮಾಡಿದರೆ ಒಳ್ಳೆಯದು ಎಂದರು.