April 26, 2025
WhatsApp Image 2024-07-29 at 12.14.51_29f15de7

ಮದುವೆ ನಿಶ್ಚಯವಾಗಿದ್ದ ಹೆಣ್ಣು ಮಗಳೊಬ್ಬಳು ನಿನ್ನೆ ಕಸದ ಲಾರಿಯಡಿಗೆ ಸಿಲುಕಿ ದುರಂತವಾಗಿ ಸಾವನ್ನಪ್ಪಿದ ಘಟನೆ ಕೆ.ಆರ್ ಸರ್ಕಲ್ ಬಳಿ ನಡೆದಿದೆ. ಬೆಳಗ್ಗೆ ಮದುವೆ ಬಗ್ಗೆ ಪ್ರಸ್ತಾಪವಾಗಿ ಸಂಜೆ ವೇಳೆಗೆ BBMP ಕಸದ ಲಾರಿಯಡಿಗೆ ಸಿಲುಕಿ ಶಿಲ್ಪ ಎಂಬಾಕೆ ಕೊನೆಯುಸಿರೆಳೆದಿದ್ದಾಳೆ.ನಿನ್ನೆ ರಾತ್ರಿ 9 ಗಂಟೆಗೆ ಪ್ರಶಾಂತ್ (25) ಮತ್ತು ಶಿಲ್ಪ (25) ಬೈಕ್ನಲ್ಲಿ ಚಲಿಸುತ್ತಿದ್ದ ವೇಳೆ BBMP ಕಸದ ಲಾರಿಯಡಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಮೃತರಿಬ್ಬರು ಸ್ನೇಹಿತರಾಗಿದ್ದು, ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಐಟಿಪಿಎಲ್ ಟಿಸಿಎಸ್ನಲ್ಲಿ ಕೆಲಸ ಮಾಡ್ತಿದ್ದರು.

ಶಿಲ್ಪ ಆಂಧ್ರದ ಇಂದುಪುರ ನಿವಾಸಿ. ನಾಗವಾರದ ಪಿಜಿಯಲ್ಲಿ ವಾಸ ಮಾಡಿಕೊಂಡಿದ್ದಳು. ಈಕೆ ತಂದೆ ವೆಂಕಟರಾಮ ರೆಡ್ಡಿ. ಗಾರೆ ಮೇಸ್ತ್ರಿ ಕೆಲಸ ಮಾಡಿಕೊಂಡು ಬದುಕು ಸಾಗಿಸುತ್ತಿದ್ದರು. ವೆಂಕಟರಾಮ ರೆಡ್ಡಿಗೆ ಒಟ್ಟು ಮೂವರು ಹೆಣ್ಣು ಮಕ್ಕಳು. ಇಬ್ಬರು ಹೆಣ್ಣುಮಕ್ಕಳಿಗೆ ಮದುವೆ ಆಗಿದೆ. ಶಿಲ್ಪ ಕೊನೆಯ ಮಗಳು. ಆಕೆಯ ಮದುವೆ ತಯಾರಿ ಕೂಡ ನಡೀತಿತ್ತು. ಆದರೆ ಅಷ್ಟರಲ್ಲಿ ವಿಧಿಯ ಕ್ರೂರ ಲೀಲೆಗೆ ಬಲಿಯಾಗಿದ್ದಾಳೆ.
ಶಿಲ್ಪ ಮೃತದೇಹ ಬೌರಿಂಗ್ ಆಸ್ಪತ್ರೆ ಶವಾಗಾರದಲ್ಲಿದ್ದು, ಆಕೆಯನ್ನು ಕಾಣಲು ಪೋಷಕರು ಆಗಮಿಸಿದ್ದಾರೆ. ಶವಾಗಾರದ ಬಳಿ ಶಿಲ್ಪ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Leave a Reply

Your email address will not be published. Required fields are marked *