September 13, 2024

ಭಾರತ ಹಾಗೂ ಮಾಲ್ಡೀವ್ಸ್ ಸಂಬಂಧ ಹಳಸಿದ್ದು ಅದನ್ನು ಸರಿಪಡಿಸಲು ಮಾಲ್ಡೀವ್ಸ್ ಪ್ರವಾಸೋದ್ಯಮ ಸಚಿವ ಇಬ್ರಾಹಿಂ ಫೈಸಲ್ ಇಂದು ಭಾರತಕ್ಕೆ ಆಗಮಿಸುತ್ತಿದ್ದಾರೆ. ಭಾರತೀಯ ಪ್ರವಾಸಿಗರನ್ನು ಆಕರ್ಷಿಸಲು ಪ್ರಮುಖ ನಗರಗಳಲ್ಲಿ ರೋಡ್ ಶೋ ನಡೆಸಲು ನಿರ್ಧರಿಸಿದ್ದಾರೆ. ಈ ನಿಟ್ಟಿನಲ್ಲಿ ಮಾಲ್ಡೀವ್ಸ್ ಸರ್ಕಾರ ವೆಲ್ಕಮ್ ಇಂಡಿಯಾ ಅಭಿಯಾನದ ನೀಲನಕ್ಷೆ ಸಿದ್ಧಪಡಿಸಿದ್ದು, ಇದರ ಅಡಿಯಲ್ಲಿ ಭಾರತೀಯ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಮಾಲ್ಡೀವ್ಸ್ಗೆ ಭೇಟಿ ನೀಡುವಂತೆ ಮನವಿ ಮಾಡಲಾಗುವುದು.

ಈ ಅಭಿಯಾನದ ಅಡಿಯಲ್ಲಿ ಮಾಲ್ಡೀವ್ಸ್ ಪ್ರವಾಸೋದ್ಯಮ ಸಚಿವರು ಭಾರತದ ಮೂರು ಪ್ರಮುಖ ನಗರಗಳಲ್ಲಿ ರೋಡ್ ಶೋಗಳಲ್ಲಿ ಭಾಗವಹಿಸಲಿದ್ದಾರೆ. ಈ ರೋಡ್ ಶೋಗಳು ದೆಹಲಿ, ಮುಂಬೈ ಹಾಗೂ ಬೆಂಗಳೂರಿನಲ್ಲಿ ನಡೆಯಲಿದೆ. ಜುಲೈ 30ರಂದು ದೆಹಲಿಯಲ್ಲಿ, ಆಗಸ್ಟ್ 1 ರಂದು ಮುಂಬೈನಲ್ಲಿ, ಆಗಸ್ಟ್ 3ರಂದು ಬೆಂಗಳೂರಿನಲ್ಲಿ ರೋಡ್ ಶೋಗಳು ನಡೆಯಲಿವೆ. ಭಾರತ ಹಾಗೂ ಮಾಲ್ಡೀವ್ಸ್ ನಡುವಿನ ಪ್ರವಾಸೋದ್ಯಮ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ.

Leave a Reply

Your email address will not be published. Required fields are marked *