October 12, 2024

ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಸಕಲೇಶಪುರದಲ್ಲಿ ಬೃಹತ್ ಪ್ರಮಾಣದಲ್ಲಿ ಭೂ ಕುಸಿತ ಸಂಭವಿಸಿದೆ. ರಸ್ತೆಯ ಸಮೇತ ಭೂಮಿ ಕೊಚ್ಚಿ ಹೋಗಿರುವ ಘಟನೆ ಸಕಲೇಶಪುರ ತಾಲೂಕಿನ ಕುಂಬರಡಿ ಹಾರ್ಲೇ ಎಸ್ಟೇಟ್​ ಮಧ್ಯೆ ಸಂಭವಿಸಿದೆ. ಪರಿಣಾಮವಾಗಿ ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಕುಂಬರಡಿ ಹಾಗೂ ಹಾರ್ಲೇ ಎಸ್ಟೇಟ್ ಮಧ್ಯೆ ಭೂ ಕುಸಿತ ಸಂಭವಿಸಿದೆ. ಪರಿಣಾಮವಾಗಿ ರಸ್ತೆ 200 ಮೀಟರ್​​ಗೂ ಹೆಚ್ಚು ದೂರು ಕೊಚ್ಚಿ ಹೋಗಿದೆ. ರಸ್ತೆಯೇ ಕೊಚ್ಚಿ ಹೋಗಿರುವುದರಿಂದ ಹತ್ತಾರು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ರಸ್ತೆಯ ಪಕ್ಕದಲ್ಲಿ ಎತ್ತಿನಹೊಳೆ ಕಾಮಗಾರಿ ನಡೆಯುತ್ತಿತ್ತು. ಸಕಲೇಶಪುರ ತಾಲ್ಲೂಕಿನ ಹಲವೆಡೆ ರಸ್ತೆಗಳು ಕೊಚ್ಚಿ ಹೋಗಿ ಅವಾಂತರ ಸೃಷ್ಟಿಯಾಗಿದೆ. ದಾರಿಗಳೇ ಜಲಾವೃತವಾಗಿ ಜನರ ಆತಂಕ ಹೆಚ್ಚಾಗಿದೆ.

Leave a Reply

Your email address will not be published. Required fields are marked *