September 14, 2024

ಲಾರಿ-ಬೈಕ್ ಅಪಘಾತದಲ್ಲಿ ಇಬ್ಬರು ಟೆಕ್ಕಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿಂತೆ ಬಿಬಿಎಂಪಿ ಕಸದ ಲಾರಿ ಚಾಲಕನನ್ನು ಹಲಸೂರು ಗೇಟ್ ಸಂಚಾರ ಪೊಲೀಸರು ಬಂಧಿಸಿದ್ದಾರೆ. ಶಿವಶಂಕರ್ (38) ಬಂಧಿತ ಲಾರಿ ಚಾಲಕ. ಅಪಘಾತದ ಬಳಿಕ ಚಾಲಕ ಶಿವಶಂಕರ್ ಪರಾರಿಯಾಗಿದ್ದನು. ಸದ್ಯ ಪೊಲೀಸರು ಚಾಲಕ ಶಿವಶಂಕರ್​ನನ್ನು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಚಾಲಕ ಶಿವಶಂಕರ್ ರಕ್ತ ಮಾದರಿಯನ್ನು ಸಂಗ್ರಹಿಸಿ ಎಫ್ಎಸ್ಎಲ್ ಪರೀಕ್ಷೆಗೆ ಕಳುಹಿಸಲಾಗಿದೆ. ಕುಡಿದು ವಾಹನ ಚಾಲನೆ ಮಾಡಿರುವ ಬಗ್ಗೆ ಪರಿಶೀಲನೆ ನಡೆಯಲಿದೆ.

Leave a Reply

Your email address will not be published. Required fields are marked *