March 14, 2025

ಮಾನಸಿಕ ಅಸ್ವಸ್ಥ ಮಗ ತನ್ನ ಹೆತ್ತ ತಾಯಿಯ ಮೇಲೆಯೇ ಕೊಡಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಅಟ್ಟಹಾಸ ಮೆರೆದಿರುವ ಅಮಾನವೀಯ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಬೆಳವಣಕಿ ಗ್ರಾಮದ ಕುರುಬರ ಓಣಿಯಲ್ಲಿ ನಡೆದಿದೆ. ಸದ್ಯ ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ಮಾಡಿ ಆರೋಪಿ ಮಗನನ್ನು ಪೊಲೀಸರು ಬಂಧಿಸಿದ್ದಾರೆ.

ಮಾನಸಿಕ ಅಸ್ವಸ್ಥರಾಗಿರುವ ಶಿವಪ್ಪ ತಟ್ಟಿ ಎಂಬಾತ ತನ್ನ ತಾಯಿ ಗೌರವ್ವನ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ್ದು ಗೌರವ್ವನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳನ್ನು ರೋಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿ ಶಿವಪ್ಪ ಈ ಹಿಂದೆ ತಂದೆ ಮೇಲೂ ಹಲ್ಲೆ ಮಾಡಿದ್ದ. ಈಗ ತಾಯಿ ಮೇಲೂ ಹಲ್ಲೆ ನಡೆಸಿದ್ದಾನೆ.

Leave a Reply

Your email address will not be published. Required fields are marked *