Home / ಬೆಳಗಾವಿ / ಕೆಡಿಪಿ ಸಭೆಗೆ ಶಾಸಕರ ಬರ; 18ರಲ್ಲಿ ಐವರು ಮಾತ್...

ಕೆಡಿಪಿ ಸಭೆಗೆ ಶಾಸಕರ ಬರ; 18ರಲ್ಲಿ ಐವರು ಮಾತ್ರ ಹಾಜರು

B
By B News Desk
September 16, 2026 5,291 views 0 comments Edit Article

ಬೆಳಗಾವಿ: ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿರುವ ಸಂದರ್ಭದಲ್ಲೇ 2026-27ನೇ ಸಾಲಿನ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಗೆ ಬಹುತೇಕ ಶಾಸಕರು ಗೈರುಹಾಜರಾಗಿದ್ದು, ಕ್ಷೇತ್ರಗಳ ಸಮ...

ಕೆಡಿಪಿ ಸಭೆಗೆ ಶಾಸಕರ ಬರ; 18ರಲ್ಲಿ ಐವರು ಮಾತ್ರ ಹಾಜರು
ಬೆಳಗಾವಿ: ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿರುವ ಸಂದರ್ಭದಲ್ಲೇ 2026-27ನೇ ಸಾಲಿನ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಗೆ ಬಹುತೇಕ ಶಾಸಕರು ಗೈರುಹಾಜರಾಗಿದ್ದು, ಕ್ಷೇತ್ರಗಳ ಸಮಸ್ಯೆಗಳ ಚರ್ಚೆ ಬಗ್ಗೆ ಆತಂಕ ವ್ಯಕ್ತವಾಗಿದೆ. ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣಸೌಧ ಸಭಾಂಗಣದಲ್ಲಿ ಈ ಸಭೆ ನಡೆಯುತ್ತಿದೆ. ಸಭೆಗೆ 18 ಶಾಸಕರ ಪೈಕಿ ಕೇವಲ ಐವರು ಶಾಸಕರು ಮಾತ್ರ ಹಾಜರಾಗಿದ್ದಾರೆ. ಶಾಸಕರಾದ ಮಹಾಂತೇಶ ಕೌಜಲಗಿ, ಆಸೀಫ್ ಸೇಠ್, ಬಾಬಾಸಾಹೇಬ್ ಪಾಟೀಲ, ವಿಶ್ವಾಸ ವೈದ್ಯ, ದುರ್ಯೋಧನ ಐಹೊಳೆ ಹಾಜರಿದ್ದು, ಎಂಎಲ್ಸಿ ನಾಗರಾಜ್ ಯಾದವ್ ಸಹ ಸಭೆಯಲ್ಲಿ ಭಾಗಿಯಾಗಿದ್ದಾರೆ. ಗೈರುಹಾಜರಾದವರಲ್ಲಿ ಸಚಿವ ಲಕ್ಷ್ಮಣ ಸವದಿ, ಮಾಜಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ನಿಖಿಲ್ ಕತ್ತಿ, ಶಶಿಕಲಾ ಜೊಲ್ಲೆ, ಅಶೋಕ ಪಟ್ಟಣ್, ವಿಠ್ಠಲ್ಲ ಹಲಗೇಕರ್, ಮಹೇಂದ್ರ ತಮ್ಮನ್ನವರ, ಅಭಯ್ ಪಾಟೀಲ, ರಾಜು ಕಾಗೆ, ಗಣೇಶ ಹುಕ್ಕೇರಿ ಇದ್ದಾರೆ. ಸಂಸದರಾದ ಜಗದೀಶ್ ಶೆಟ್ಟರ್, ಪ್ರಿಯಾಂಕಾ ಜಾರಕಿಹೊಳಿ, ಎಂಎಲ್ಸಿಗಳಾದ ಪ್ರಕಾಶ ಹುಕ್ಕೇರಿ, ಚೆನ್ನರಾಜ್ ಹಟ್ಟಿಹೊಳಿ ಸಹ ಸಭೆಗೆ ಗೈರುಹಾಜರಾಗಿದ್ದಾರೆ. ಸಭೆಯಲ್ಲಿ ಕೃಷಿ ಇಲಾಖೆ, ತೋಟಗಾರಿಕೆ, ಆಹಾರ ಇಲಾಖೆ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಯುತ್ತಿದೆ. ಸಚಿವ ಸತೀಶ್ ಜಾರಕಿಹೊಳಿ ಅವರು ಕುಡಿಯುವ ನೀರು ಮತ್ತು ಮಳೆ ಕೊರತೆ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಬರದ ಛಾಯೆ ಇದ್ದರೂ, ಶಾಸಕರು ಸಭೆಗೆ ಹಾಜರಾಗದೆ ಕ್ಷೇತ್ರದ ಸಮಸ್ಯೆಗಳನ್ನು ಗಮನಕ್ಕೆ ತರದಿರುವುದು ಚರ್ಚೆಗೆ ಕಾರಣವಾಗಿದೆ.
ಹಕ್ಕುತ್ಯಾಗ
ಈ ಲೇಖನವು AI ಬಳಸಿ ರಚಿತವಾಗಿರಬಹುದು, ಸಂಪಾದಿಸಿರಬಹುದು ಅಥವಾ ಅನುವಾದಿಸಿರಬಹುದು ಹಾಗೂ ಇದರಲ್ಲಿ ವಾಸ್ತವಾಂಶ, ಭಾಷಾಂತರ ಅಥವಾ ಸಾಂದರ್ಭಿಕ ದೋಷಗಳಿರಬಹುದು. ಪ್ರಮುಖ ಮಾಹಿತಿಯನ್ನು ಅಧಿಕೃತ ಮೂಲಗಳಿಂದ ದೃಢಪಡಿಸಿಕೊಳ್ಳಲು ಓದುಗರಿಗೆ ಸಲಹೆ ನೀಡಲಾಗುತ್ತದೆ. AI-ನೆರವಿನ ವಿಷಯದಿಂದ ಉಂಟಾಗುವ ಯಾವುದೇ ತಪ್ಪುಗಳಿಗೆ ಪ್ರಕಾಶಕರು ಜವಾಬ್ದಾರರಾಗಿರುವುದಿಲ್ಲ. ಕಾನೂನು ಹಕ್ಕುತ್ಯಾಗ
SHARE THIS ARTICLE
B

B News Desk

Senior Staff Journalist and Correspondent at B News. Covering breaking global stories, contemporary culture, and modern innovations.

B News Live Search

Search Articles

Type any keyword to instantly search stories across categories.
Send News