ಕನ್ನಡ ರಾಜ್ಯೋತ್ಸವದ ದಿನದಂದೇ ಕರಾಳ ದಿನ ಆಚರಿಸಿ ಗಡಿ ಭಾಗದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿರುವ ಎಂಇಎಸ್ ಪುಂಡರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಅನುಮತಿ ಇಲ್ಲದೆ ಮೆರವಣಿಗೆ ನಡೆಸಲು ಅವಕಾಶ ನೀಡಿದವರ ಮೇಲೂ ತನಿಖೆಯಾಗಬೇಕು ಎಂದು ಕನ್ನಡಪರ ಹೋರಾಟಗಾರರು ಆಗ್ರಹಿಸಿದ್ದಾರೆ.ಶಾಂತಿ ಮತ್ತು ಸುವ್ಯವಸ್ಥೆಗೆ ಸವಾಲು: ಪ್ರತಿ ವರ್ಷ ನಾವೆಲ್ಲರೂ ಒಗ್ಗಟ್ಟಿನಿಂದ ನಾಡಹಬ್ಬ ಆಚರಿಸುವ ವೇಳೆ ಇಂತಹ ಸಂಘಟನೆಗಳು ಭಾಷಾ ಸಾಮರಸ್ಯಕ್ಕೆ ಧಕ್ಕೆ ತರುವ ಪ್ರಯತ್ನ ಮಾಡುತ್ತಲೇ ಬಂದಿವೆ. ಗಡಿ ಜಿಲ್ಲೆಯಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಪಾತ್ರದ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ. ಸದ್ಯ ಘಟನಾ ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದ್ದು, ಮುಂದಿನ ಕಾನೂನು ಕ್ರಮಗಳ ಬಗ್ಗೆ ವಲಯದ ಹಿರಿಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನದ ಕಿರಿಕ್: ಅನುಮತಿ ನಿರಾಕರಣೆ ನಡುವೆಯೂ ಮೆರವಣಿಗೆ, ಕನ್ನಡ ವಿರೋಧಿ ಘೋಷಣೆ ಆರೋಪ!
ಕನ್ನಡ ರಾಜ್ಯೋತ್ಸವದಂದೇ ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನದ ಮೆರವಣಿಗೆ ನಡೆಸಿದ್ದು, ಅನುಮತಿ ನಿರಾಕರಿಸಿದರೂ ಕನ್ನಡ ವಿರೋಧಿ ಘೋಷಣೆ ಕೂಗಿರುವುದು ವಿವಾದ ಸೃಷ್ಟಿಸಿದೆ.
ಈ ಲೇಖನವನ್ನು ಆಲಿಸಿ TTS AI
B News Desk
Senior Staff Journalist and Correspondent at B News. Covering breaking global stories, contemporary culture, and modern innovations.