Home / ಬೆಳಗಾವಿ / ಬೆಳಗಾವಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ಗೆ ಲಕ...

ಬೆಳಗಾವಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ಗೆ ಲಕ್ಷಾಂತರ ಮೌಲ್ಯದ ಕಬ್ಬು ಸುಟ್ಟು ಕರಕಲು

B
By B News Desk
November 3, 2026 0 comments Edit Article

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಲಕ್ಷಾಂತರ ರೂ. ಮೌಲ್ಯದ ಕಬ್ಬು ಬೆಂಕಿಗಾಹುತಿಯಾಗಿದೆ.

ಈ ಲೇಖನವನ್ನು ಆಲಿಸಿ TTS AI

1 ನಿಮಿಷಗಳ ಓದು • 133 ಪದಗಳು (ಸಿದ್ಧವಾಗಿದೆ)
ಅಕ್ಷರ ಗಾತ್ರ:
ವೇಗ:
ಬೆಳಗಾವಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ಗೆ ಲಕ್ಷಾಂತರ ಮೌಲ್ಯದ ಕಬ್ಬು ಸುಟ್ಟು ಕರಕಲು
ಬೆಳಗಾವಿ: ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಸಂಭವಿಸಿದ ಅಚಾತುರ್ಯವೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಟಾವಿಗೆ ಬಂದಿದ್ದ ರೂ. 4.20 ಲಕ್ಷ ಮೌಲ್ಯದ ಕಬ್ಬು ಬೆಂಕಿಗಾಹುತಿಯಾಗಿರುವ ದಾರುಣ ಘಟನೆ ಮಂಗಳವಾರ ನಡೆದಿದೆ. ಗ್ರಾಮದ ರೈತ ಆನಂದ ಗಂಗಪ್ಪಾ ನಿರಡಿ ಎಂಬುವರಿಗೆ ಸೇರಿದ್ದ 2 ಎಕರೆ 15 ಗುಂಟೆ ಜಮೀನಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಬ್ಬಿನ ಬೆಲೆ ಹೆಚ್ಚಳಕ್ಕೆ ಒತ್ತಾಯಿಸಿ ರೈತರು ತೀವ್ರ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸುವಿಕೆಯನ್ನು ವಿಳಂಬಗೊಳಿಸಿದ್ದು, ಇದರಿಂದ ಕಟಾವಿಗೆ ಬಂದ ಕಬ್ಬು ಗದ್ದೆಯಲ್ಲೇ ಉಳಿಯುವಂತಾಗಿದೆ. ಇದೀಗ ಅನಿರೀಕ್ಷಿತ ಬೆಂಕಿ ಅವಘಡದಿಂದ ರೈತ ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ. ಅಧಿಕಾರಿಗಳ ಭೇಟಿ ಹಾಗೂ ತನಿಖೆ: ಅಪಾಯದ ಸುದ್ದಿ ತಿಳಿಯುತ್ತಿದ್ದಂತೆ ತಕ್ಷಣವೇ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸುವ ಮೂಲಕ ಅಕ್ಕಪಕ್ಕದ ಜಮೀನುಗಳಿಗೆ ಬೆಂಕಿ ಹಬ್ಬದಂತೆ ತಡೆದು ದೊಡ್ಡ ಮಟ್ಟದ ಅನಾಹುತವನ್ನು ತಪ್ಪಿಸಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಹಕ್ಕುತ್ಯಾಗ
ಈ ಲೇಖನವು AI ಬಳಸಿ ರಚಿತವಾಗಿರಬಹುದು, ಸಂಪಾದಿಸಿರಬಹುದು ಅಥವಾ ಅನುವಾದಿಸಿರಬಹುದು ಹಾಗೂ ಇದರಲ್ಲಿ ವಾಸ್ತವಾಂಶ, ಭಾಷಾಂತರ ಅಥವಾ ಸಾಂದರ್ಭಿಕ ದೋಷಗಳಿರಬಹುದು. ಪ್ರಮುಖ ಮಾಹಿತಿಯನ್ನು ಅಧಿಕೃತ ಮೂಲಗಳಿಂದ ದೃಢಪಡಿಸಿಕೊಳ್ಳಲು ಓದುಗರಿಗೆ ಸಲಹೆ ನೀಡಲಾಗುತ್ತದೆ. AI-ನೆರವಿನ ವಿಷಯದಿಂದ ಉಂಟಾಗುವ ಯಾವುದೇ ತಪ್ಪುಗಳಿಗೆ ಪ್ರಕಾಶಕರು ಜವಾಬ್ದಾರರಾಗಿರುವುದಿಲ್ಲ. ಕಾನೂನು ಹಕ್ಕುತ್ಯಾಗ
TAGS: ಬೆಳಗಾವಿ ಸುದ್ದಿ ಬೈಲಹೊಂಗಲ ಕಬ್ಬು ಸುಟ್ಟು ಕರಕಲು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕರ್ನಾಟಕ ರೈತರು B News Kannada
SHARE THIS ARTICLE
B

B News Desk

Senior Staff Journalist and Correspondent at B News. Covering breaking global stories, contemporary culture, and modern innovations.

B News Live Search

Search Articles

Type any keyword to instantly search stories across categories.
Send News