ಗೋಕಾಕದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಅಣಕು ಶವಯಾತ್ರೆ ನಡೆಸುವ ಮೂಲಕ ರೈತರು ಆಡಳಿತ ವ್ಯವಸ್ಥೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸರ್ಕಾರದ ಮೌನಕ್ಕೆ ರೈತರ ಆಕ್ರೋಶ: ಕಬ್ಬು ಕಟಾವು ಆರಂಭವಾಗಿ ತಿಂಗಳುಗಳೇ ಕಳೆದರೂ ಇನ್ನೂ ಕನಿಷ್ಠ ಬೆಂಬಲ ಬೆಲೆ (MSP) ಅಥವಾ ವೈಜ್ಞಾನಿಕ ದರ ಘೋಷಿಸದ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ರೈತರು ಬಾಯ್ಬಡಿದುಕೊಂಡು ಬೊಬ್ಬೆ ಹಾಕಿ ತಮ್ಮ ಸಂಕಷ್ಟ ತೋಡಿಕೊಂಡಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಮುಖ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಉಗ್ರ ಪ್ರತಿಭಟನೆ: ರಾಜ್ಯ ಬಂದ್ ಕರೆಗೆ ವ್ಯಾಪಕ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ
ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಕರೆ ನೀಡಿರುವ ರಾಜ್ಯ ಬಂದ್ ಬೆಳಗಾವಿ ಜಿಲ್ಲೆಯಲ್ಲಿ ತೀವ್ರಗೊಂಡಿದ್ದು, ಗ್ರಾಮೀಣ ಭಾಗದಲ್ಲಿ ಜನಜೀವನ ಸ್ತಬ್ಧಗೊಂಡಿದೆ.
ಈ ಲೇಖನವನ್ನು ಆಲಿಸಿ TTS AI
B News Desk
Senior Staff Journalist and Correspondent at B News. Covering breaking global stories, contemporary culture, and modern innovations.