ಕಬ್ಬು ಬೆಳೆಗಾರರು ದೇಶದ ಬೆನ್ನೆಲುಬು. ಅವರ ಸಂಕಷ್ಟ ನಿವಾರಣೆ ಮತ್ತು ನ್ಯಾಯಯುತ ಲಾಭ ಒದಗಿಸುವುದು ಆಡಳಿತ ವ್ಯವಸ್ಥೆಯ ಆದ್ಯ ಕರ್ತವ್ಯ. ರೈತರ ಹಿತ ರಕ್ಷಿಸಲು ರಾಜ್ಯ ಸರ್ಕಾರ ಯಾವುದೇ ವಿಳಂಬವಿಲ್ಲದೆ ತುರ್ತು ಕ್ರಮ ಕೈಗೊಳ್ಳಬೇಕು.ಕೇಂದ್ರದಿಂದ ಉನ್ನತ ಮಟ್ಟದ ಸಮಿತಿ ರಚನೆ: ಕೃಷಿ ಕ್ಷೇತ್ರ ಹಾಗೂ ಸಕ್ಕರೆ ಉದ್ಯಮದ ದೀರ್ಘಕಾಲಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ, ಖ್ಯಾತ ಕೃಷಿ ಅರ್ಥಶಾಸ್ತ್ರಜ್ಞ ಮತ್ತು ಸಾರ್ವಜನಿಕ ನೀತಿ ತಜ್ಞ ರಮೇಶ್ ಚಂದ್ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರವು ಉನ್ನತ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಉತ್ಪಾದನಾ ವೆಚ್ಚ, ಮಾರುಕಟ್ಟೆ ಆದಾಯ ಹಾಗೂ ಸಕ್ಕರೆ ಕಾರ್ಖಾನೆಗಳ ಆರ್ಥಿಕ ಕಾರ್ಯಸಾಧ್ಯತೆಯನ್ನು ಕೂಲಂಕಷವಾಗಿ ಪರಿಶೀಲಿಸಿ ರೈತರಿಗೆ ಹೆಚ್ಚಿನ ಆದಾಯ ದೊರಕಿಸಿಕೊಡಲು ಸೂಕ್ತ ಶಿಫಾರಸುಗಳನ್ನು ಮಾಡಲಿದೆ.
ಕರ್ನಾಟಕದ ಕಬ್ಬು ಬೆಳೆಗಾರರ ರಕ್ಷಣೆಗೆ 'SAP' ಜಾರಿಗೊಳಿಸಿ: ಸಿಎಂಗೆ ಕೇಂದ್ರ ಸಚಿವ ಜೋಶಿ ಪತ್ರ
ಕಬ್ಬು ಬೆಳೆಗಾರರ ಹಿತರಕ್ಷಣೆಗಾಗಿ ರಾಜ್ಯ ಸರ್ಕಾರ ತಕ್ಷಣವೇ 'ಎಸ್ಎಪಿ' ಜಾರಿಗೊಳಿಸಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮುಖ್ಯಮಂತ್ರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಈ ಲೇಖನವನ್ನು ಆಲಿಸಿ TTS AI
B News Desk
Senior Staff Journalist and Correspondent at B News. Covering breaking global stories, contemporary culture, and modern innovations.