ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಗಡಿ ಜಿಲ್ಲೆಯಲ್ಲಿ ಸೌಹಾರ್ದತೆ ಕದಡುವ ಯಾರಿಗೂ ಅವಕಾಶ ನೀಡುವುದಿಲ್ಲ. ಕಾನೂನು ಉಲ್ಲಂಘಿಸಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಎಚ್ಚರಿಸಿದ್ದಾರೆ.ಯಾರಿಗೆಲ್ಲಾ ಅನ್ವಯ? ಈ ನಿರ್ಬಂಧ ಆದೇಶವು ಪ್ರಮುಖವಾಗಿ ವಿಜಯ್ ದೇವಣೆ, ಸಂಜಯ್ ಪವಾರ್, ಸುನಿಲ್ ಮೋದಿ, ಸುನಿಲ್ ಶಿಂತ್ರೆ, ವಿಶಾಲ್ ದೇವಕುಳೆ ಹಾಗೂ ಮಂಜಿತ್ ಮಾನೆ ಸೇರಿದಂತೆ ಇತರೆ ಮಹಾರಾಷ್ಟ್ರದ ಪ್ರಚೋದನಕಾರಿ ಮುಖಂಡರಿಗೆ ಮತ್ತು ಅವರ ಬೆಂಬಲಿಗರಿಗೆ ಅನ್ವಯಿಸಲಿದೆ. ನಿರ್ಬಂಧಿತ ಆದೇಶವನ್ನು ಉಲ್ಲಂಘಿಸದಂತೆ ನೋಡಿಕೊಳ್ಳಲು ಬೆಳಗಾವಿ ನಗರ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ನಗರ ಹಾಗೂ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಹದ್ದಿನ ಕಣ್ಣಿಡಲಾಗಿದೆ.
ಕನ್ನಡ ರಾಜ್ಯೋತ್ಸವ: ಮಹಾರಾಷ್ಟ್ರದ ಎಂಇಎಸ್, ಶಿವಸೇನೆ ಮುಖಂಡರಿಗೆ ಬೆಳಗಾವಿ ಪ್ರವೇಶ ನಿರ್ಬಂಧ
ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮಹಾರಾಷ್ಟ್ರದ ಶಿವಸೇನೆ ಮತ್ತು ಎಂಇಎಸ್ ಮುಖಂಡರಿಗೆ ಬೆಳಗಾವಿ ಪ್ರವೇಶವನ್ನು ಜಿಲ್ಲಾಡಳಿತ ನಿರ್ಬಂಧಿಸಿದೆ.
ಈ ಲೇಖನವನ್ನು ಆಲಿಸಿ TTS AI
B News Desk
Senior Staff Journalist and Correspondent at B News. Covering breaking global stories, contemporary culture, and modern innovations.