"ಪ್ರತಿವರ್ಷ ರೈತರು ಪ್ರತಿಭಟನೆ ಮಾಡುವುದು ತಪ್ಪಬೇಕು. ರೈತರಿಗೆ ಶಾಶ್ವತ ಪರಿಹಾರ ಸಿಗಬೇಕು ಎಂಬ ಉದ್ದೇಶದಿಂದ ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ. ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಕಬ್ಬಿಗೆ ಬೆಲೆ ಸಿಗುವ ವಿಶ್ವಾಸವಿದೆ" ಎಂದು ಸಚಿವ ಲಕ್ಷ್ಮಣ ಸವದಿ ತಿಳಿಸಿದರು.ಮಹಾರಾಷ್ಟ್ರಕ್ಕೆ ಕಬ್ಬು ಕಳುಹಿಸದಂತೆ ಮನವರಿಕೆ: ಅಥಣಿ ತಾಲೂಕಿನಿಂದ ಹೆಚ್ಚಿನ ಪ್ರಮಾಣದ ಕಬ್ಬು ಮಹಾರಾಷ್ಟ್ರ ರಾಜ್ಯಕ್ಕೆ ಕಳುಹಿಸಲ್ಪಡುತ್ತಿದ್ದು, ಇದನ್ನು ತಡೆಯಲು ರೈತರಿಗೆ ಮನವರಿಕೆ ಮಾಡಲಾಗುವುದು. ತೂಕದಲ್ಲಿ ಮೋಸವಾಗದಂತೆ ಎಚ್ಚರಿಕೆ ವಹಿಸಲಾಗುವುದು ಹಾಗೂ ನ್ಯಾಯಸಮ್ಮತ ಬೆಲೆಯನ್ನು ರಾಜ್ಯದಲ್ಲೇ ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ಅವರು ಭರವಸೆ ನೀಡಿದರು. ಕೇಂದ್ರ ಸರ್ಕಾರದ ಎಂಎಸ್ಪಿ ಹೆಚ್ಚಳಕ್ಕೆ ಒತ್ತಾಯ: ಕಬ್ಬು ಮತ್ತು ಸಕ್ಕರೆ ಉದ್ಯಮದ ಸ್ಥಿರತೆಗಾಗಿ ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು (MSP) ಹೆಚ್ಚಿಸುವಂತೆ ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಗ್ಯಾಸ್ ಸಿಲಿಂಡರ್ ಮಾದರಿಯಲ್ಲಿ ಗೃಹಬಳಕೆ ಮತ್ತು ವಾಣಿಜ್ಯ ಬಳಕೆಗೆ ಪ್ರತ್ಯೇಕ ಸಕ್ಕರೆ ದರ ನಿಗದಿಪಡಿಸುವಂತೆ ಒತ್ತಾಯಿಸಲಾಗಿದೆ ಎಂದು ಸಚಿವರು ವಿವರಿಸಿದರು.
ಪ್ರತಿ ಟನ್ ಕಬ್ಬಿಗೆ 4 ಸಾವಿರ ರೂ. ದರ ನಿಗದಿ ಕುರಿತು ನಿರ್ಧಾರ: ಎರಡು ದಿನಗಳಾವಕಾಶ ಕೋರಿದ ಸಕ್ಕರೆ ಕಾರ್ಖಾನೆ ಮಾಲೀಕರು
ಪ್ರತಿ ಟನ್ ಕಬ್ಬಿಗೆ 4 ಸಾವಿರ ರೂ. ದರ ನಿಗದಿಪಡಿಸುವಂತೆ ಕಾರ್ಖಾನೆ ಮಾಲೀಕರಿಗೆ ಸಿಎಂ ಸೂಚಿಸಿದ್ದು, ಮಾಲೀಕರು ಎರಡು ದಿನಗಳ ಕಾಲಾವಕಾಶ ಕೋರಿದ್ದಾರೆ ಎಂದು ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಈ ಲೇಖನವನ್ನು ಆಲಿಸಿ TTS AI
B News Desk
Senior Staff Journalist and Correspondent at B News. Covering breaking global stories, contemporary culture, and modern innovations.