"ಕೂಡ್ಲಿಗಿ ಪಟ್ಟಣದ ಸಂಡೂರು ರಸ್ತೆಯಲ್ಲಿ ಯಾವುದೇ ಸೂಕ್ತ ಯೋಜನೆಯಿಲ್ಲದೆ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸಲಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದ್ದು, ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ತಕ್ಷಣವೇ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಕಾಮಗಾರಿಯನ್ನು ವೈಜ್ಞಾನಿಕವಾಗಿ ಪೂರ್ಣಗೊಳಿಸಬೇಕು." - ಗುನ್ನಳ್ಳಿ ರಾಘವೇಂದ್ರ, ಕಾರ್ಮಿಕ ಮುಖಂಡಖಾಸಗೀಕರಣ ಯತ್ನಕ್ಕೆ ವಿರೋಧ: ಸರ್ಕಾರಿ ಶಾಲೆಗಳನ್ನು ದತ್ತು ನೀಡುವ ನೆಪದಲ್ಲಿ ಶೈಕ್ಷಣಿಕ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸಲು ಸರ್ಕಾರ ಹುನ್ನಾರ ನಡೆಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಬಡ ಮಕ್ಕಳ ಉಚಿತ ಶಿಕ್ಷಣಕ್ಕೆ ಕಂಠಕ ತರುವ ಈ ಯೋಜನೆಯನ್ನು ಸರ್ಕಾರ ತಕ್ಷಣವೇ ಕೈಬಿಡಬೇಕು ಎಂದು ಆಗ್ರಹಿಸಿದರು. ಒಂದು ವೇಳೆ ತಮ್ಮ ಹಕ್ಕೊತ್ತಾಯಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸದಿದ್ದರೆ ಮುಂಬರುವ ದಿನಗಳಲ್ಲಿ ತಾಲೂಕಿನಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಸಿಪಿಐ(ಎಂ) ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಬೆಲೆ ಏರಿಕೆ ಹಾಗೂ ಅವೈಜ್ಞಾನಿಕ ರಸ್ತೆ ಕಾಮಗಾರಿ ಖಂಡಿಸಿ ಸಿಪಿಐ(ಎಂ) ಬೃಹತ್ ಪ್ರತಿಭಟನೆ
ಕೂಡ್ಲಿಗಿಯಲ್ಲಿ ಬೆಲೆ ಏರಿಕೆ, ಸಂಡೂರು ರಸ್ತೆಯ ಅವೈಜ್ಞಾನಿಕ ಕಾಮಗಾರಿ ಹಾಗೂ ಶಾಲೆ ದತ್ತು ನೀಡುವುದನ್ನು ಖಂಡಿಸಿ ಸಿಪಿಐ(ಎಂ) ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಈ ಲೇಖನವನ್ನು ಆಲಿಸಿ TTS AI
B News Desk
Senior Staff Journalist and Correspondent at B News. Covering breaking global stories, contemporary culture, and modern innovations.