"ಅಕ್ರಮ ಗೋಹತ್ಯೆ ಅಥವಾ ಅಕ್ರಮ ಜಾನುವಾರು ಸಾಗಣೆ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದರೆ ನೇರವಾಗಿ ಪೊಲೀಸ್ ಇಲಾಖೆಗೆ ತಿಳಿಸಬೇಕು. ಪೊಲೀಸರೇ ಅಂತಹ ಪ್ರಕರಣಗಳನ್ನು ಪತ್ತೆಹಚ್ಚಿ ಸೂಕ್ತ ಕಾಯ್ದೆಯಡಿ ಕ್ರಮ ಕೈಗೊಳ್ಳಲಿದ್ದಾರೆ. ಅದನ್ನು ಬಿಟ್ಟು ಖಾಸಗಿ ವ್ಯಕ್ತಿಗಳು ಕಾನೂನು ಕೈಗೆತ್ತಿಕೊಂಡು ಅನಗತ್ಯ ಗೊಂದಲ ಸೃಷ್ಟಿಸಿದರೆ ಅವರ ವಿರುದ್ಧ 10 ವರ್ಷಗಳವರೆಗೆ ಜೈಲು ಶಿಕ್ಷೆಯಾಗುವ ಕಠಿಣ ಕಾಯ್ದೆಯಡಿ FIR ದಾಖಲಿಸಲಾಗುವುದು."ಸೋಮವಾರ ಬೆಳಗಿನ ಜಾವ ನಡೆದ ವಾಹನ ಅಡ್ಡಗಟ್ಟುವಿಕೆ ಪ್ರಕರಣದ ಸತ್ಯಾಸತ್ಯತೆಯನ್ನು ಇಲಾಖೆ ತನಿಖೆ ನಡೆಸುತ್ತಿದ್ದು, ಅಕ್ರಮವಾಗಿ ವಾಹನ ತಡೆದು ಕಾನೂನು ಕೈಗೆತ್ತಿಕೊಂಡಿರುವುದು ಸಾಬೀತಾದರೆ ಸಂಬಂಧಪಟ್ಟವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಮಂಗಳೂರು ಪೊಲೀಸ್ ಕಮಿಷನರೇಟ್ ಸ್ಪಷ್ಟಪಡಿಸಿದೆ.
- ಸುಧೀರ್ ಕುಮಾರ್ ರೆಡ್ಡಿ, ಮಂಗಳೂರು ನಗರ ಪೊಲೀಸ್ ಆಯುಕ್ತ
ಕಾನೂನುಬದ್ಧ ಮಾಂಸ ಸಾಗಣೆ ತಡೆದರೆ 10 ವರ್ಷ ಜೈಲು ಶಿಕ್ಷೆ: ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ
ಮಂಗಳೂರಿನಲ್ಲಿ ಕಾನೂನುಬದ್ಧ ಮಾಂಸ ಸಾಗಣೆ ಮತ್ತು ಮಾರಾಟವನ್ನು ತಡೆದು ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ 10 ವರ್ಷಗಳ ಜೈಲು ಶಿಕ್ಷೆಯ ಕಠಿಣ ಕಲಂ ಅಡಿ ಪ್ರಕರಣ ದಾಖಲಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಎಚ್ಚರಿಸಿದ್ದಾರೆ.
ಈ ಲೇಖನವನ್ನು ಆಲಿಸಿ TTS AI
B News Desk
Senior Staff Journalist and Correspondent at B News. Covering breaking global stories, contemporary culture, and modern innovations.