ಬೆಳಗಾವಿಯಲ್ಲಿ ನಡೆದ ಜಿಲ್ಲಾಮಟ್ಟದ 'ಸ್ಪರ್ಧಾ ಸಂಗಮ' ರೀಲ್ಸ್ ಸ್ಪರ್ಧೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಸಂಕಲ್ಪ ಕಂಬಿ ತೃತೀಯ ಸ್ಥಾನ ಗಳಿಸಿ ಜ್ಞಾನಗಂಗಾ ಶಾಲೆ ಹಾಗೂ ಕಿತ್ತೂರು ನಾಡಿಗೆ ಕೀರ್ತಿ ತಂದಿದ್ದಾರೆ.
CHANNAMMA KITTUR: ಬೆಳಗಾವಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಪ್ರತಿಷ್ಠಿತ 'ಸ್ಪರ್ಧಾ ಸಂಗಮ' ರೀಲ್ಸ್ ಸ್ಪರ್ಧೆಯಲ್ಲಿ ಕಿತ್ತೂರಿನ
ಜ್ಞಾನಗಂಗಾ ಶಿಕ್ಷಣ ಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿ
ಸಂಕಲ್ಪ ಕಂಬಿ ತೃತೀಯ ಸ್ಥಾನ ಗಳಿಸುವ ಮೂಲಕ ಶಾಲೆ ಹಾಗೂ ಕಿತ್ತೂರು ನಾಡಿಗೆ ಕೀರ್ತಿ ತಂದಿದ್ದಾನೆ.
ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸಂಸ್ಥೆಯ ಶ್ರೀ ಸಿದ್ದರಾಮೇಶ್ವರ ಪದವಿಪೂರ್ವ ಮಹಾವಿದ್ಯಾಲಯ ಹಾಗೂ ನಾಗನೂರು ಶ್ರೀ ಪ್ರಭುದೇವ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ಸಹಯೋಗದಲ್ಲಿ ಸಿದ್ದರಾಮೇಶ್ವರ ಮಹಾವಿದ್ಯಾಲಯದ ಆವರಣದಲ್ಲಿ ಈ ವಿನೂತನ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.
ಸೃಜನಶೀಲತೆಗೆ ಸಿಕ್ಕ ಸೂಕ್ತ ವೇದಿಕೆ:
ವಿದ್ಯಾರ್ಥಿಗಳಲ್ಲಿ ಅಡಗಿರುವ ಸೃಜನಶೀಲತೆ, ತಾಂತ್ರಿಕ ನೈಪುಣ್ಯತೆ ಹಾಗೂ ಆಧುನಿಕ ಡಿಜಿಟಲ್ ಮಾಧ್ಯಮಗಳ ಮೂಲಕ ಅಭಿವ್ಯಕ್ತಿಗೊಳಿಸುವ ಸಾಮರ್ಥ್ಯವನ್ನು ಹೊರತರುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಬೆಳಗಾವಿ ಜಿಲ್ಲೆಯಾದ್ಯಂತ ವಿವಿಧ ಪ್ರೌಢಶಾಲೆಗಳ ನೂರಾರು ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಈ ಕಠಿಣ ಸ್ಪರ್ಧೆಯಲ್ಲಿ ಜ್ಞಾನಗಂಗಾ ಶಾಲೆಯ ವಿದ್ಯಾರ್ಥಿ ಸಂಕಲ್ಪ ಕಂಬಿ ತಮ್ಮ ವಿಶಿಷ್ಟ ಆಲೋಚನೆ, ಆಧುನಿಕ ಪ್ರಸ್ತುತಿ ಹಾಗೂ ಸೃಜನಶೀಲ ಚಿಂತನೆಯ ಮೂಲಕ ತೀರ್ಪುಗಾರರ ಗಮನ ಸೆಳೆದು
ತೃತೀಯ ಬಹುಮಾನ ಪಡೆದುಕೊಳ್ಳುವಲ್ಲಿ ಯಶಸ್ವಿಯಾದರು.
ಪ್ರಶಂಸೆ ಮತ್ತು ಶುಭಾಶಯಗಳ ಮಹಾಪೂರ:
ಶಾಲಾ ಹಂತದಲ್ಲಿಯೇ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಾಧನೆ ಮಾಡುತ್ತಿರುವ ಸಂಕಲ್ಪ ಕಂಬಿ ಅವರ ಈ ಸಾಧನೆಗೆ ಪಾಲಕರು, ಶಿಕ್ಷಕರು ಹಾಗೂ ಶಾಲಾ ಆಡಳಿತ ಮಂಡಳಿಯವರು ಅತ್ಯಂತ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
"ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಗೆ ಸೂಕ್ತ ವೇದಿಕೆ ಮತ್ತು ಪ್ರೋತ್ಸಾಹ ದೊರೆತಾಗ ಅವರು ಸಾಧನೆಯ ಶಿಖರವೇರಲು ಸಾಧ್ಯ ಎಂಬುದಕ್ಕೆ ಸಂಕಲ್ಪ ಕಂಬಿ ಅವರ ಈ ಸಾಧನೆಯೇ ಸಾಕ್ಷಿಯಾಗಿದೆ. ಮುಂಬರುವ ದಿನಗಳಲ್ಲಿ ಇವರಿಂದ ಇನ್ನಷ್ಟು ಉನ್ನತ ಸಾಧನೆ ಮೂಡಿಬರಲಿ." - ಶಾಲಾ ಆಡಳಿತ ಮಂಡಳಿ.