Home / ವಿಜಯನಗರ / ಆಧಾರ್ ಕೇಂದ್ರಗಳ ಕೊರತೆ; ಸಾರ್ವಜನಿಕರ ಪರದಾಟ,...

ಆಧಾರ್ ಕೇಂದ್ರಗಳ ಕೊರತೆ; ಸಾರ್ವಜನಿಕರ ಪರದಾಟ, ಹೆಚ್ಚುವರಿ ಕೇಂದ್ರ ತೆರೆಯಲು ಆಗ್ರಹ

Vrushbhendra
Reported by Vrushbhendra Reporter
September 24, 2026 0 comments Edit Article

ಕೂಡ್ಲಿಗಿ ತಾಲೂಕಿನಲ್ಲಿ ಆಧಾರ್ ಸೇವೆಗಾಗಿ ಸಾರ್ವಜನಿಕರ ಪರದಾಟ ಮುಂದುವರಿದಿದ್ದು, ಕೂಡಲೇ ಹೆಚ್ಚುವರಿ ಆಧಾರ್ ಕೇಂದ್ರಗಳನ್ನು ತೆರೆಯುವಂತೆ ವಿವಿಧ ಸಂಘಟನೆಗಳು ಒತ್ತಾಯಿಸಿವೆ.

ಈ ಲೇಖನವನ್ನು ಆಲಿಸಿ TTS AI

1 ನಿಮಿಷಗಳ ಓದು • 156 ಪದಗಳು (ಸಿದ್ಧವಾಗಿದೆ)
ಅಕ್ಷರ ಗಾತ್ರ:
ವೇಗ:
ಆಧಾರ್ ಕೇಂದ್ರಗಳ ಕೊರತೆ; ಸಾರ್ವಜನಿಕರ ಪರದಾಟ, ಹೆಚ್ಚುವರಿ ಕೇಂದ್ರ ತೆರೆಯಲು ಆಗ್ರಹ
ಕೂಡ್ಲಿಗಿ: ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕು ಕೇಂದ್ರ ಹಾಗೂ ಹೋಬಳಿ ಕಚೇರಿಗಳಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕೇಂದ್ರಗಳ ತೀವ್ರ ಕೊರತೆಯಿಂದಾಗಿ ಸಾರ್ವಜನಿಕರು ಪ್ರತಿನಿತ್ಯ ಪರದಾಡುವಂತಾಗಿದ್ದು, ಕೂಡಲೇ ಹೆಚ್ಚುವರಿ ತಾತ್ಕಾಲಿಕ ಆಧಾರ್ ಕೇಂದ್ರಗಳನ್ನು ತೆರೆಯುವಂತೆ ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ. ಪಟ್ಟಣದ ತಾಲೂಕು ಆಡಳಿತ ಕೇಂದ್ರ ಹಾಗೂ ನಾಡ ಕಚೇರಿಗಳಲ್ಲಿರುವ ಏಕೈಕ ಆಧಾರ್ ಕೇಂದ್ರಗಳು ಸದಾ ಜನದಟ್ಟಣೆಯಿಂದ ಕೂಡಿರುತ್ತವೆ. ಸೇವೆ ಪಡೆಯಲು ಸಾರ್ವಜನಿಕರು ಬೆಳಿಗ್ಗೆಯಿಂದ ಸಂಜೆವರೆಗೆ ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ಕಾಯಬೇಕಾದ ಅನಿವಾರ್ಯತೆ ಎದುರಾಗಿದೆ. ಕೆಲವರಿಗೆ ದಿನವಿಡೀ ಕರಿದರು ಕೆಲಸ ಮುಗಿಯದೆ ಮರುದಿನವೂ ಅಲೆದಾಡಬೇಕಾದ ಪರಿಸ್ಥಿತಿ ಇದೆ ಎಂದು ನಾಗರಿಕರು ಅಳಲು ತೋಡಿಕೊಂಡಿದ್ದಾರೆ. ಪ್ರಮುಖ ಬೇಡಿಕೆಗಳು: ತಾಲೂಕು ಆಡಳಿತ ಕಚೇರಿಯಲ್ಲಿ ಕನಿಷ್ಠ ಎರಡು ಹೆಚ್ಚುವರಿ ತಾತ್ಕಾಲಿಕ ಆಧಾರ್ ನೋಂದಣಿ ಕೇಂದ್ರಗಳನ್ನು ಆರಂಭಿಸಬೇಕು. ಇದರೊಂದಿಗೆ ತಾಲೂಕಿನ ಪ್ರಮುಖ ಹೋಬಳಿ ಆಡಳಿತ ಕೇಂದ್ರಗಳಲ್ಲಿ ತಲಾ ಒಂದರಂತೆ ಹೆಚ್ಚುವರಿ ಕೇಂದ್ರಗಳನ್ನು ತೆರೆಯಬೇಕು ಎಂದು ವಂದೇ ಮಾತರಂ ಜಾಗೃತಿ ವೇದಿಕೆ, ಸಿಐಟಿಯು ಕಾರ್ಮಿಕ ಸಂಘಟನೆ, ರೈತ ಸಂಘಟನೆ, ದಲಿತ ಸಂಘರ್ಷ ಸಮಿತಿ, ಕನ್ನಡ ಪರ ಹಾಗೂ ಮಹಿಳಾ ಪರ ಸಂಘಟನೆಗಳು ಜಂಟಿಯಾಗಿ ಆಗ್ರಹಿಸಿವೆ.
ಸಾರ್ವಜನಿಕರಿಗೆ ಸುಲಭವಾಗಿ ಆಧಾರ್ ಸೇವೆ ಲಭ್ಯವಾಗುವಂತೆ ಜಿಲ್ಲಾಡಳಿತ ತುರ್ತಾಗಿ ಸ್ಪಂದಿಸಿ, ಹೆಚ್ಚುವರಿ ಕೇಂದ್ರಗಳನ್ನು ಮಂಜೂರು ಮಾಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಸಂಘಟನೆಗಳ ಮುಖಂಡರು ಎಚ್ಚರಿಸಿದ್ದಾರೆ.
ಹಕ್ಕುತ್ಯಾಗ
ಈ ಲೇಖನವು AI ಬಳಸಿ ರಚಿತವಾಗಿರಬಹುದು, ಸಂಪಾದಿಸಿರಬಹುದು ಅಥವಾ ಅನುವಾದಿಸಿರಬಹುದು ಹಾಗೂ ಇದರಲ್ಲಿ ವಾಸ್ತವಾಂಶ, ಭಾಷಾಂತರ ಅಥವಾ ಸಾಂದರ್ಭಿಕ ದೋಷಗಳಿರಬಹುದು. ಪ್ರಮುಖ ಮಾಹಿತಿಯನ್ನು ಅಧಿಕೃತ ಮೂಲಗಳಿಂದ ದೃಢಪಡಿಸಿಕೊಳ್ಳಲು ಓದುಗರಿಗೆ ಸಲಹೆ ನೀಡಲಾಗುತ್ತದೆ. AI-ನೆರವಿನ ವಿಷಯದಿಂದ ಉಂಟಾಗುವ ಯಾವುದೇ ತಪ್ಪುಗಳಿಗೆ ಪ್ರಕಾಶಕರು ಜವಾಬ್ದಾರರಾಗಿರುವುದಿಲ್ಲ. ಕಾನೂನು ಹಕ್ಕುತ್ಯಾಗ
TAGS: ಕೂಡ್ಲಿಗಿ ಆಧಾರ್ ಕೇಂದ್ರ ವಿಜಯನಗರ ಜಿಲ್ಲೆ ಸಾರ್ವಜನಿಕರ ಪರದಾಟ ಜಿಲ್ಲಾಡಳಿತ ಕರ್ನಾಟಕ ಸುದ್ದಿ
SHARE THIS ARTICLE
Vrushbhendra

Vrushbhendra

Verified Journalist
Reporter

Ground reporting and news dispatch filed by Vrushbhendra for B News. Bringing authentic regional and breaking stories directly from the field.

B News Live Search

Search Articles

Type any keyword to instantly search stories across categories.
Send News